ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ಅಸಮಾಧಾನದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಹಾರದಲ್ಲಿ ಎಲ್ ಜೆಪಿ (ರಾಮ್ ವಿಲಾಸ್ ಪಾಸ್ವನ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಪಕ್ಷಕ್ಕೆ ಕೇವಲ 5 ಸೀಟು ನೀಡಲಾಗಿದೆ. ಇದೇ ವೇಳೆ ಬಿಜೆಪಿ 17 ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದು, 16 ಸ್ಥಾನಗಳನ್ನು ಜೆಡಿಯುಗೆ ಬಿಟ್ಟುಕೊಟ್ಟಿದೆ.
ಇದೇ ವೇಳೆ ಎನ್ ಡಿಎ ಮೈತ್ರಿಕೂಟದ ಮತ್ತೆರಡು ಪಕ್ಷಗಳಾದ ಹಿಂದೂಸ್ತಾನ್ ಅವಾಮ್ ಮೋರ್ಚಾ (ಎಚ್ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಪಕ್ಷಗಳಿಗೆ ತಲಾ 1 ಸ್ಥಾನ ಬಿಟ್ಟುಕೊಡಲಾಗಿದೆ.
ಸೀಟು ಹಂಚಿಕೆ ವಿಷಯದಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪಶುಪತಿ ಪರಾಸ್ ಮಂಗಳವಾರ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.
ಸೀಟು ಹಂಚಿಕೆಯಲ್ಲಿ ಆಗಿರುವ ಅನ್ಯಾಯ ಖಂಡಿಸಿರುವ ಪಶುಪತಿ ಪರಾಸ್ ಎನ್ ಡಿಎಯಿಂದ ಹೊರಬರುವ ಸೂಚನೆ ನೀಡಿದ್ದು, ಈ ಬಗ್ಗೆ ಪಕ್ಷದ ಜೊತೆ ಚರ್ಚಿಸಿ ತೀರ್ಮಾನ ಪ್ರಕಟಿಸುವುದಾಗಿ ತಿಳಿಸಿದೆ.