ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಜನಸೇನಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ನೇತೃತ್ವದಲ್ಲಿ ಬಿಜೆಪಿ ಮತ್ತು ಜನಸೇನಾ ಪಕ್ಷಗಳ ಮೈತ್ರಿ ಸರ್ಕಾರ ಆಂಧ್ರಪ್ರದೇಶದಲ್ಲಿ ಅಧಿಕಾರ ಹಿಡಿಯಲಿದೆ.
ಬುಧವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಪಟ್ಟ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ.