Thursday, May 14, 2026
Google search engine
HomeದೇಶPlane Crash: ಪತನಗೊಂಡ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ!

Plane Crash: ಪತನಗೊಂಡ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ!

ಗುಜರಾತ್  ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಗುಜರಾತ್ ರಾಜಧಾನಿ ಅಹಮದಾಬಾದ್ ನ ವಿಮಾನ ನಿಲ್ದಾಣದ ಸಂಭವಸಿದ ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್ ನಿಂದ ಲಂಡನ್ ಪ್ರಯಾಣ ಬೆಳೆಸುತ್ತಿದ್ದ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಅಪ್ಪಳಿಸಿದೆ ಎಂದು ಹೇಳಲಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದೆ. ಆದರೆ ಅವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ahamdabad plane crash

ವಿಮಾನದ ಹಿಂದಿನ ರೆಕ್ಕೆ ಮರಕ್ಕೆ ಬಡಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಘಟನೆಯ ಮಾಹಿತಿ ಬರುತ್ತಿದ್ದಂತೆ 7 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನ ಮಧ್ಯಾಹ್ನ 1.17 ನಿಮಿಷಕ್ಕೆ ಹೊರಟ್ಟಿತ್ತು. ಮರಕ್ಕೆ ಬಡಿದ ಕೂಡಲೇ ವಿಮಾನ ಪತನಗೊಂಡಿದೆ. ವಿಮಾನ ಪತನಗೊಳ್ಳುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದ್ದು, ಕಿ.ಮೀ. ದೂರದಲ್ಲಿಯೂ ಕಾಣಿಸುತ್ತಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments