Sunday, September 13, 2026
Google search engine
Homeಬೆಂಗಳೂರುಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ

ಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಹಳದಿ ಮಾರ್ಗ ಹಾಗೂ ಬೆಳಗಾವಿ-ಪುಣೆ ವಂದೇ ಭಾರತ್‌ ರೈಲು ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೇರಿದಂತೆ ಹಲವು ಮುಖಂಡರು ಆಹ್ವಾನಿಸಿದರು.

ಬೆಂಗಳೂರಿನಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮನಹಳ್ಳಿವರೆಗಿನ ನಮ್ಮ ಮೆಟ್ರೋ ಫೇಸ್‌-2 ರೈಲು ಸಂಚಾರಕ್ಕೆ ಮೋದಿ ಹಸಿರುನಿಶಾನೆ ತೋರಿದರು. ಈ ವೇಳೆ ಬೆಂಗಳೂರು ಎಲೆಕ್ಟ್ರಾನಿಕ್‌ ಸಿಟಿಯಿಂದ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್‌ ಪಡೆದು ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಸಾಥ್‌ ನೀಡಿದರು.

ನೂತನ ರೈಲು ಮಾರ್ಗವು 19 ಕಿ.ಮೀ. ದೂರ ಹೊಂದಿದ್ದು, 7160 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ನೂತನ ರೈಲು ಮಾರ್ಗಕ್ಕೆ ಚಾಲೆ ನೀಡುವ ಮೂಲಕ ಬೆಂಗಳೂರಿನಲ್ಲಿ ಒಟ್ಟಾರೆ ರೈಲು ಮಾರ್ಗದ ವಿಸ್ತಾರ 93 ಕಿ.ಮೀ.ಗೆ ಏರಿಕೆ ಆದಂತೆ ಆಗಿದೆ.

ಇದೇ ವೇಳೆ ಬೆಳಗಾವಿ ಮತ್ತು ಪುಣೆ ನಡುವಣ ವಂದೇ ಭಾರತ್‌ ರೈಲು ಸಂಚಾರಕ್ಕೆ ಚಾಲನೆ ನೀಡಿದರು. ಅಲ್ಲದೇ ಅಮೃತಸರ- ವೈಷ್ಣವದೇವಿ ಕಾತ್ರಿ ರೈಲು ಸಂಚಾರಕ್ಕೆ ಚಾಲನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments