ಬೆಂಗಳೂರು: ಯಾವುದೇ ಮಾಹಿತಿ ನೀಡದೇ ಏಕಾಏಕಿ ದಿನಗೂಲಿ ಕಾರ್ಮಿಕರ ಶೆಡ್‌ಗಳನ್ನು ನೆಲಸಮಗೊಳಿಸಿ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸೋಮವಾರ ಬೆಳಗ್ಗೆ 11ಕ್ಕೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಮುನಿರತ್ನ ಅವರ ವಿರುದ್ಧ ಕೇಳಿ ಬಂದಿದ್ದು, ಶಾಸಕರು ಸೇರಿದಂತೆ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ಸ ದಾಖಲಾಗಿದೆ.
ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಶೆಡ್‌ಗಳನ್ನ ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಏಕಾಏಕಿ ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿಯೊಂದಿಗೆ ಬಂದು ಶೆಡ್‌ಗಳನ್ನ ನೆಲಸಮಗೊಳಿಸಿದರು. ಇದರಿಂದಾಗಿ ನಾವು ಕೂಡಿಟ್ಟ ಹಣ, ಚಿನ್ನ ಮಣ್ಣುಪಾಲು ಮಾಡಿದ್ದಾರೆ.
ತಾವು ಮನವಿ ಮಡಿದರೂ ಸಹ ಜಾತಿ ನಿಂದನೆ ಮಾಡಿ, ಮಹಿಳೆಯರಿಗೆ ಚಪ್ಪಲಿ ಕಾಲಿನಿಂದ ಒದ್ದು ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಶೆಡ್‌ನಲ್ಲಿ ವಾಸವಿದ್ದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಶಾಸಕ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಕಾಯ್ದೆ (ದೌರ್ಜನ್ಯ ತಡೆ) ಕಾಯ್ದೆ, ಬಿಎನ್ಎಸ್ 324, 74, 351 ಮತ್ತು 190 ಅಡಿ ಪ್ರಕರಣ ದಾಖಲಿಸಲಾಗಿದೆ