ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 1 ಮತದಿಂದ ಅಂಗೀಕಾರ ಪಡೆಯುವ ಮೂಲಕ ಬಹುತಮ ಇದ್ದರೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ವಿಧಾನಪರಿಷತ್ ನಲ್ಲಿ ಮುಖಭಂಗ ಅನುಭವಿಸಿದೆ.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತ ಹೊಂದಿದ್ದ ಆಡಳಿತಾರೂಢ ಕಾಂಗ್ರೆಸ್ ಮಂಗಳವಾರ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿತ್ತು.
ಬುಧವಾರ ವಿಪಕ್ಷಗಳ ಒತ್ತಡಕ್ಕೆ ಮಣಿದ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಧ್ವನಿಮತಕ್ಕೆ ಹಾಕಿದರು. ಧ್ವನಿಮತದಲ್ಲಿ ವಿಧೇಯಕದ ಪರ 26 ಹಾಗೂ ವಿರುದ್ಧವಾಗಿ 25 ಮತಗಳು ಬಿದ್ದವು. ಇದರಿಂದ ತಾನೇ ತೋಡಿದ ಗುಂಡಿಗೆ ಬಿದ್ದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳು ತೀವ್ರ ಮುಜುಗರಕ್ಕೆ ಒಳಗಾಯಿತು.
ಬಹುಮತ ಹೊಂದಿದ್ದೇವೆ ಎಂಬ ವಿಶ್ವಾಸದಲ್ಲಿ ಬಿಜೆಪಿ ಏಕಾಏಕಿ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕುವಂತೆ ಒತ್ತಾಯಸಿದರು. ಇದರಿಂದ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಧ್ವನಿಮತಕ್ಕೆ ಹಾಕಿದಾಗ ಬಿಜೆಪಿ ಸದಸ್ಯರಾದ ಡಾ.ಎಂ.ಜಿ, ಮಳೆ. ಸುನೀಲ್ ವಲ್ಯಾಪುರೆ, ಎಚ್.ವಿಶ್ವನಾಥ್ ಹಾಗೂ ಜೆಡಿಎಸ್ ನ ನಾಲ್ವರು ಸದಸ್ಯರು ಗೈರು ಹಾಜರಾಗಿದ್ದರು. ಇದರಿಂದ ಬಿಜೆಪಿಗೆ ೧ ಮತದಿಂದ ಸೋಲುಂಟಾಗಿದೆ.