Monday, 16 November 2026 — Kannadavahini
BREAKING NEWS
ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ
ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 475 ವೀಕ್ಷಣೆಗಳು
dk shivakumar

ಹಾಸನ: ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಕುತ್ತು ಉಂಟಾಗಲಿದೆ. ಇದು ಜನರಿಗೆ ಅರ್ಥವಾಗಿದೆ. ಆದ ಕಾರಣಕ್ಕೆ ಜನರು ಅವರನ್ನು ಅಧಿಕಾರಕ್ಕೆ ಬರಲು ಅವಕಾಶ ಕೊಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಹಾಸನ ಜಿಲ್ಲೆಯ ಭುವನಹಳ್ಳಿ ಹೆಲಿಪ್ಯಾಡ್ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಲಾಗಿದೆ ಎನ್ನುವ ಕುಮಾರಸ್ವಾಮಿ ಹಾಗೂ ಬಿಜೆಪಿಯವರ ಟೀಕೆಗಳ ಬಗ್ಗೆ ತಿರುಗೇಟು ನೀಡಿದರು.

“ವಿಪಕ್ಷಗಳಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಏನಿವೆ? ರಾಜ್ಯದ ಜನರಿಗೆ ನಮ್ಮ ಎಲ್ಲಾ ಗ್ಯಾರಂಟಿಗಳು ಯಶಸ್ವಿಯಾಗಿ ತಲುಪುತ್ತಿವೆ. ಇದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಜನತಾದಳ ಹಾಗೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ವಿರೋಧಿಗಳು” ಎಂದರು.

ಇಂಧನ ಬೆಲೆ ಏರಿಕೆಯಾದ ಕಾರಣ ಗ್ಯಾರಂಟಿ ಜಾರಿಯಾಗಿದ್ದು

ಬೆಲೆ ಏರಿಕೆ ವಿರುದ್ದ ಟೀಕೆಗಳ ಕುರಿತು ಕೇಳಿದಾಗ, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದರಿಂದಲೇ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಜನರಿಗೆ ನೆರವಾಗುತ್ತಿದ್ದೇವೆ. ರೈತರಿಗೆ ಇನ್ಪುಟ್ ಸಬ್ಸಿಡಿ ಮೊತ್ತವನ್ನು 2,500 ರಿಂದ 5,000 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸಬ್ಸಿಡಿ 30 ಸಾವಿರ ಕೋಟಿಗಳಿಗೆ ಏರಿಕೆಯಾಗಿದೆ. ಹಾಲಿನ ಬೆಲೆ ಏರಿಕೆಯಿಂದಾಗಿ ರೈತನಿಗೆ ಅನುಕೂಲವಾಗುತ್ತಿದೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗುತ್ತಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದಾಗ ನಮ್ಮ ರಾಜ್ಯದ ಹಾಲಿನ ಬೆಲೆ ಕಡಿಮೆ ಇದೆ. ಆದರೂ ಪ್ರತಿಪಕ್ಷಗಳು ಪ್ರತಿಭಟನೆ‌ ಮಾಡುತ್ತಿವೆ”ಎಂದರು.

ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ

“ಬಿಜೆಪಿಯವರಿಗೆ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನವನ್ನು ರಾಜ್ಯಕ್ಕೆ ಕೊಡಿಸಲು ಆಗಿಲ್ಲ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ತಡೆಗಟ್ಟಲಿಲ್ಲ. ಕಬ್ಬು ಬೆಳೆಗಾರರ ಪರವಾಗಿ ತೀರ್ಮಾನ ಮಾಡುತ್ತಿಲ್ಲ. 10 ವರ್ಷಗಳಿಂದ ಸಕ್ಕರೆ ಬೆಲೆ ಹೆಚ್ಚಳ ಮಾಡಿಲ್ಲ. ರೈತರು ಕೇಳುವುದರಲ್ಲಿ ತಪ್ಪೇನಿಲ್ಲ. ಎಲ್ಲಾ ಬೆಲೆ ಹೆಚ್ಚಳವಾಗುತ್ತಿರುವಾಗ ಸಕ್ಕರೆ ಬೆಲೆಯನ್ನು ನಿಗದಿ ಮಾಡಬೇಕಾದ್ದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದನ್ನು ಏಕೆ ಮಾಡುತ್ತಿಲ್ಲ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ” ಎಂದರು.

ಹಾಲಿನ ಸೊಸೈಟಿಗಳು ಉಳಿಯಬೇಕು

ಹಾಸನ ಹಾಲು ಒಕ್ಕೂಟಕ್ಕೆ ಎಂಟುವರೆ ಕೋಟಿ ನಷ್ಟವಾಗುತ್ತಿದೆ ಎನ್ನುವ ಶಾಸಕ ಹೆಚ್ ಡಿ ರೇವಣ್ಣ ಹೇಳಿಕೆ ಬಗ್ಗೆ ಕೇಳಿದಾಗ “ಬೆಲೆ ಜಾಸ್ತಿಯಾದರೂ ನಷ್ಟವಾಗುತ್ತಿದೆ ಎಂದರೆ ಅವರು ಒಕ್ಕೂಟವನ್ನು ಹೇಗೆ ನಡೆಸುತ್ತಿರಬಹುದು? ಹೇಗೆ ನಷ್ಟವಾಗುತ್ತಿದೆ? ಎಂಬ ಬಗ್ಗೆ ಕೆಎಂಎಫ್ ಕಾರ್ಯದರ್ಶಿಗಳನ್ನು ಕರೆದು ವಿಚಾರಿಸುತ್ತೇನೆ. ಅವರ ಸಮಸ್ಯೆಗಳೇನು ಎಂದು ಕೇಳುತ್ತೇನೆ. ಹಾಲಿನ ಸೊಸೈಟಿಗಳು ಉಳಿಯಬೇಕು. ಈ ಸಮಸ್ಯೆ ಬಗ್ಗೆ ನಾನು ಹೊಸದಾಗಿ ಕೇಳುತ್ತಿದ್ದೇನೆ. ಅವರಷ್ಟು ನನಗೆ ಅನುಭವವಿಲ್ಲ” ಎಂದು ಹೇಳಿದರು.

ರಾಜ್ಯದ ವಿಚಾರವಾಗಿ ಪ್ರಧಾನಿಗಳೊಂದಿಗೆ ಚರ್ಚೆ

“ಮೆಟ್ರೋ ಗುಲಾಬಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಬರಗಾಲ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಅನೇಕ ವಿಚಾರಗಳ ಬಗ್ಗೆ ಅವರ ಗಮನ ಸೆಳೆಯಲಿದ್ದೇನೆ” ಎಂದು ಹೇಳಿದರು.

ಹಾಸನಾಂಬ ಕಾರಿಡಾರ್ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ

ಹಾಸನಾಂಬ ದೇವಾಲಯದ ಅಭಿವೃದ್ಧಿಗೆ ಯಡಿಯೂರಪ್ಪ ಸರ್ಕಾರ ಬಿಟ್ಟರೆ ಬೇರೆ ಯಾವ ಸರ್ಕಾರವು ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಸರ್ಕಾರ ಹಾಸನಾಂಬ ಕಾರಿಡಾರ್ ಗೆ ಅನುದಾನ ಬಿಡುಗಡೆ ಮಾಡಲಿದೆಯೇ ಎಂದು ಕೇಳಿದಾಗ “ಈ ಬಗ್ಗೆ ಜಿಲ್ಲಾ ಆಡಳಿತದ ಬಳಿ ಮಾತನಾಡುತ್ತೇನೆ. ನನ್ನವರೆಗೆ ಯಾವ ಪ್ರಸ್ತಾವನೆಯೂ ಬಂದಿಲ್ಲ. ಮಾಧ್ಯಮಗಳು ಮಾತ್ರ ಕೇಳುತ್ತಿದ್ದೀರಿ. ಕುಂದು ಕೊರತೆಗಳೇನು ಎಂದು ವಿಚಾರಿಸಿದ ನಂತರ ಮಾತನಾಡುತ್ತೇನೆ” ಎಂದರು.

“ಬೆಳಕಿನ ಹಬ್ಬ ದೀಪಾವಳಿ ಜನರ ಬದುಕಿನಲ್ಲಿ ಬೆಳಕು ತುಂಬಲಿ ಎಂದು ಸರ್ಕಾರದ ಪರವಾಗಿ ಪ್ರಾರ್ಥನೆ ಮಾಡುತ್ತಿದ್ದೇನೆ. ಬಹಳ ಸಂತೋಷದಿಂದ ಹಾಸನಾಂಬೆ ದರ್ಶನಕ್ಕೆ ಬಂದಿದ್ದೇನೆ. ಕಳೆದ ಬಾರಿ ಕೃಷ್ಣ ಬೈರೇಗೌಡರು ಬಹಳ ಶಿಸ್ತಿನಿಂದ ಹಾಸನಾಂಬ ದರ್ಶನವನ್ನು ಆಯೋಜಿಸಿದ್ದರು. ಈ ಬಾರಿಯೂ ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಧ್ಯಮಗಳು ತಿಳಿಸಿವೆ. ಬರಗಾಲ ಇದ್ದರೂ ಕೂಡ ಇಲ್ಲಿಗೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದಿದ್ದಾರೆ” ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8417 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment