Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಸಿಎಂ ಸ್ಥಾನದ ವಿಷಯ ನನ್ನ, ಸಿಎಂ, ಹೈಕಮಾಂಡ್ ನಡುವಿನ ವಿಚಾರ: ಡಿಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
dk shivakumar

ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.

ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಕುರಿತು ಪ್ರಶ್ನಿಸಿದಾಗ, ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿ ಇದ್ದಾರೆ, ಅವರು ನೀಡುತ್ತಾರೆ ಎಂದು ಹೇಳಿದರು.

ದೆಹಲಿ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ” ಎಂದು ಹೇಳಿದರು.

ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ನೀರಾವರಿ ಯೋಜನೆಗಳಿಗೆ ಸಂಬಂಧಿಸಿ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment