Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ರಾಜಕೀಯ ದ್ವೇಷಕ್ಕಾಗಿ ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
siddaramiah
siddaramiah

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.

ಬಿಜೆಪಿ ಯಾವುದೇ ಪ್ರಕರಣವನ್ನು ಸಿಬಿಐ ಗೆ ವಹಿಸಿಲ್ಲ

ಬಿಜೆಪಿಯವರು ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ, ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

ಸಿಟಿ ರವಿ ಪ್ರಕರಣ ಸಿಐಡಿ ತನಿಖೆ

ಎಂಎಲ್ ಸಿ ಸಿ.ಟಿರವಿಯವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.
ಹೊಸ ವರ್ಷದ ಸಂದರ್ಭದಲ್ಲಿ ವಿರೋಧ ಪಕ್ಷದವರಿಗೆ ಭಗವಂತ ಸದ್ಭುದ್ಧಿಯನ್ನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು , ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment