Home ರಾಜಕೀಯ ವಿಚಾರಣೆಗೆ ಹಿಂದಿನ ದಿನ ಇಡಿ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ

ವಿಚಾರಣೆಗೆ ಹಿಂದಿನ ದಿನ ಇಡಿ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ

The ED wrote the letter the day before the hearing to influence the High Court: CM Siddaramaiah

by Editor
0 comments
siddaramiah

ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಜಾರಿ ನಿರ್ದೇಶನಾಲಯ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಜಾರಿ ನಿರ್ದೇಶನಾಲಯದವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಇಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

banner

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು. ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದಾಂಪತ್ಯಕ್ಕೆ ಕಾಲಿಟ್ಟ ನಾಗಚೈತನ್ಯ-ಶೋಭಿತಾ 55 ವರ್ಷದಲ್ಲೇ 2ನೇ ಬಾರಿ ತೆಲಂಗಾಣದಲ್ಲಿ ಪ್ರಬಲ ಭೂಕಂಪನ! ಸಾರ್ವಜನಿಕ ಸ್ಥಳದಲ್ಲಿ ಗೋಮಾಂಸ ಸೇವನೆ ನಿಷೇಧಿಸಿದ ಅಸ್ಸಾಂ ಸರ್ಕಾರ! Kabaddi ಪ್ರೊ.ಕಬಡ್ಡಿ ಲೀಗ್: ಗುಜರಾತ್ ಎದುರು ಬೆಂಗಳೂರು ರೋಚಕ ಟೈ ದೇಶದಲ್ಲಿ 9 ತಿಂಗಳಲ್ಲಿ 6.32 ಲಕ್ಷ ಮಂದಿಗೆ 485 ಕೋಟಿ ರೂ. ಯುಪಿಐ ವಂಚನೆ! ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಕಾಯ್ದೆ `ಕ್ರೂರ’: ಸುಪ್ರೀಂಕೋರ್ಟ್ ಚಾಟಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ನಾಳೆ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ಕೆಜಿಎಫ್‌ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಚಿವ ಬೈರತಿ ಸುರೇಶ ಸೂಚನೆ ಅಡಿಲೇಡ್ ನಲ್ಲಿ ಭಾರತೀಯ ಕ್ರಿಕೆಟಿಗರಿಗೆ ಅಪಮಾನ: ನೆಟ್ ಅಭ್ಯಾಸ ವೀಕ್ಷಣೆಗೆ ನಿರ್ಬಂಧ! Baba Vanga prediction: 2025ರಲ್ಲಿ ದುರಂತಗಳ ಸರಮಾಲೆ ನಡೆಯಲಿದೆ: ಬಾಬಾ ವಂಗಾ ಸ್ಫೋಟಕ ಭವಿಷ್ಯ