Friday, April 25, 2025
Google search engine
Homeರಾಜಕೀಯಡಿಕೆ ಶಿವಕುಮಾರ್ ಕನಸಿಗೆ ತಣ್ಣೀರು: ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ತಿರಸ್ಕಾರ

ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರು: ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ತಿರಸ್ಕಾರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪತ್ರ ಬರೆದಿದ್ದು, ಇನ್ನು ಮುಂದಿನ ದಿನಗಳಲ್ಲಿ ಇಂತಹ ಪ್ರಸ್ತಾಪ ಸಲ್ಲಿಸದಂತೆ ಸೂಚಿಸಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಗೊಳಿಸುವ ಮೂಲಕ ಗ್ರೇಟರ್ ಬೆಂಗಳೂರು ರೂಪಿಸುವ ಹಾಗೂ ಬೆಂಗಳೂರು ದಕ್ಷಿಣ ಭಾಗಕ್ಕೆ ಕೈಗಾರಿಕೆಗಳನ್ನು ಸೆಳೆದು ಭೂಮಿ ಬೆಲೆ ಹೆಚ್ಚಿಸುವ ಡಿಕೆ ಶಿವಕುಮಾರ್ ಅವರ ಕನಸಿಗೆ ತಣ್ಣೀರು ಎರಚಿದಂತೆ ಆಗಿದೆ.
ಎರಡು ತಿಂಗಳ ಹಿಂದೆ ರಾಜ್ಯ ಸರಕಾರ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಅಲ್ಲದೇ ಈ ಸಂಬಂಧ ಡಿಕೆ ಶಿವಕುಮಾರ್ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.
ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಎಚ್.ಡಿ. ಕುಮಾರಸ್ವಾಮಿ ತಮ್ಮ ಪ್ರಭಾವ ಬಳಸಿ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ರೂಪಿಸುವ ಯೋಜನೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹಿಂದೆ ಡಿಕೆ ಶಿವಕುಮಾರ್ ಆರೋಪಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments