Sunday, December 7, 2025
Google search engine
Homeಬೆಂಗಳೂರುಚಿನ್ನಾಭರಣ ವಂಚಿಸಿದ ಐಶ್ವರ್ಯಾ ಗೌಡ ವಿರುದ್ಧ ಡಿಕೆ ಸುರೇಶ್ ಪೊಲೀಸ್ ಆಯುಕ್ತರಿಗೆ ದೂರು

ಚಿನ್ನಾಭರಣ ವಂಚಿಸಿದ ಐಶ್ವರ್ಯಾ ಗೌಡ ವಿರುದ್ಧ ಡಿಕೆ ಸುರೇಶ್ ಪೊಲೀಸ್ ಆಯುಕ್ತರಿಗೆ ದೂರು

ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿಕೆ ಸುರೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಡಿಕೆ ಸುರೇಶ್ ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದು ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ನನ್ನ ಹೆಸರು ಬಳಸಿೊಂಡು ವಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಸುರೇಶ್ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments