Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಬಸವರಾಜ ಬೊಮ್ಮಾಯಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
basavaraj bommai
basavaraj bommai

ಹಾವೇರಿ: ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ದಿಟ್ಟವಾಗಿ ಕನ್ನಡ ಮಾತನಾಡುತ್ತೇನೆ ಎಂದ ಕಂಡಕ್ಟರ್ ಗೆ ಅಭಿನಂದನೆ. ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕಂಡಕ್ಟರ್ ಮೇಲಿನ ಫೋಕ್ಸೋ ಕೇಸ್ ನ್ನು ಕೂಡಲೇ ಹಿಂಪಡೆಯಬೇಕು ಈ ಘಟನೆಯ ಬಗ್ಗೆ ಮಂತ್ರಿಗಳು ಮೃದುವಾಗಿ ಮಾತನಾಡುತ್ತಾರೆ. ಮಂತ್ರಿಗಳು ಎಲ್ಲೋ ಮರಾಠಿ ಮಾತನಾಡುವವರ ಮುಲಾಜಿಗೆ ಬಿದ್ದಿದ್ದಾರೆ. ಕನ್ನಡ ಚಳುವಳಿಗಾರರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.

ಕೂಡಲೇ ಸರಕಾರ ಮಹಾರಾಷ್ಟ್ರ ಸರಕಾರದ ಜೊತೆ ಮಾತನಾಡಬೇಕು, ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು. ಇಲ್ಲಿಯ ಅನ್ನ ತಿಂದು, ನೀರು ಕುಡಿದು ನಾಲಾಯಕ್ ಅನ್ನುವ ಪದ ಬಳಕೆ ಮಾಡುವುದು ಸರಿಯಲ್ಲ. ಕೂಡಲೇ ಇಂಥವರನ್ನು ಗಡಿಪಾರು ಮಾಡಬೇಕು. ಹಿಂದೆ ನಮ್ಮ ಸರಕಾರ ಇದ್ದಾಗ ಇಂಥದ್ದೇ ಒಂದು ಪ್ರಕರಣ ನಡೆದಿತ್ತು, ಆಗ ನಮ್ಮ ಸರಕಾರ ಕಠಿಣ ಕ್ರಮ ಕೈಗೊಂಡಿತ್ತು ಎಂದು ಹೇಳಿದರು.

ಎಸ್ಸಿಪಿ ಟಿಎಸ್ ಪಿ ಹಣ ಬೇರೆ ಉದ್ದೇಶಕ್ಕೆ ಬಳಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸರಕಾರ. ಎಸ್ಸಿ ಎಸ್ಟಿ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಎಸ್ಸಿಪಿ, ಟಿಎಸ್ಪಿ ಹಣವನ್ನೆ ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವವರು ಮೊದಲು ಅಂತಹ ಸಮಾಜಗಳಿಗೆ ಹಣ ಬಿಡುಗಡೆ ಮಾಡಲಿ. ಎಸ್ ಸಿ ಎಸ್ ಟಿ ನಿಗಮಗಳಿಗೆ ಮೊದಲೇ ಕಡಿಮೆ ಹಣ ನಿಗದಿ ಮಾಡಿದ್ದಾರೆ, ಅದರಲ್ಲಿ ಈವರೆಗೆ ಕೇವಲ 25% ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment