ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಅವರನ್ನು ಬಿಜೆಪಿ ಆಯ್ಕೆ ಮಾಡಿದ್ದು, ನಾಳೆ [ಡಿಸೆಂಬರ್ 5] ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಉಸ್ತುವಾರಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ನೇತೃತ್ವದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಹೆಸರನ್ನು ಘೋಷಿಸಲಾಯಿತು.
ಡಿಸೆಂಬರ್ ೫ರಂದು ಸಂಜೆ 5 ಗಂಟೆಗೆ ಆಜಾದ್ ಮೈದಾನದಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಜಿ ಸಿಎಂ ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಎನ್ ಸಿಪಿಯ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಕೆಲವು ಸಚಿವರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.