Sunday, December 7, 2025
Google search engine
Homeರಾಜಕೀಯಹೈಕಮಾಂಡ್ ತೀರ್ಮಾನಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಹೈಕಮಾಂಡ್ ತೀರ್ಮಾನಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಾಡುವ ತೀರ್ಮಾನಕ್ಕೆ ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.

ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.

2000 ಕೋಟಿ ಅಭಿವೃದ್ಧಿಗೆ ವೆಚ್ಚ

ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ  ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಅಪಪ್ರಚಾರ

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ .  ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ.  ಸುಳ್ಳೇ ಅವರ ಮನೆ ದೇವರು ಎಂದರು.

ನುಡಿದಂತೆ ನಡೆಸಿದ್ದೇವೆ

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ  ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments