ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಉಪಹಾರ ಸೇವಿಸಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸ್ವಾಗತ ಕೋರಿದ ಡಿಕೆ ಬ್ರದರ್ಸ್, ಸಿಎಂಗೆ ಇಷ್ಟವಾದ ನಾಟಿ ಕೋಳಿ ಸಾರು ನೀಡಿ ಉಪಚರಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಮಂಗಳವಾರ ಬೆಳಿಗ್ಗೆ ಮನೆಗೆ ಬಂದ ಸಿದ್ದರಾಮಯ್ಯ ಅವರಿಗೆ ಮಾಜಿ ಸಂಸದ ಡಿಕೆ ಸುರೇಶ್ ಕಾಲಿಗೆ ನಮಸ್ಕರಿಸಿ, ಶಾಲು ಹೊದಿಸಿ ಸ್ವಾಗತಿಸಿದರೆ, ಡಿಕೆ ಶಿವಕುಮಾರ್ ಮನೆಯಲ್ಲಿ ಭಾವಚಿತ್ರಗಳನ್ನು ತೋರಿಸಿ ಘಟನೆಯನ್ನು ವಿವರಿಸಿದರು.
ಮನೆಯಲ್ಲಿ ತೋರಿಸಿದ ನಂತರ ಉಪಹಾರ ಸೇವಿಸಿದ್ದು, ನಾಟಿ ಕೋಟಿ, ಇಡ್ಲಿ, ಉಪ್ಪಿಟ್ಟು, ಕೇಸರಿಬಾತ್ ಸೇರಿದಂತೆ ಹಲವು ಖಾದ್ಯಗಳನ್ನು ವಿಶೇಷವಾಗಿ ಸಿದ್ಧಪಡಿಸಿ ಸಿದ್ದರಾಮಯ್ಯ ಅವರನ್ನು ಉಪಚರಿಸಲಾಯಿತು.
ಉಪಹಾರ ಸೇವಿಸಿದ ನಂತರ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಜೊತೆಗೆ ಅಧಿಕಾರ ಹಸ್ತಾಂತರ ಕುರಿತು ಹೈಕಮಾಂಡ್ ಗೆ ವಿವರಣೆ ನೀಡುವ ಕುರಿತು ಚರ್ಚಿಸಲಾಯಿತು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮತ್ತೊಂದು ಉಪಹಾರ ಸಭೆಯಲ್ಲೂ ಒಗ್ಗಟ್ಟು ಪ್ರದರ್ಶನ ಕಂಡುಬಂತು. “ನಾವು ಯಾವಾಗಲೂ ಬ್ರದರ್ಸ್, ಒಂದೇ ಸಿದ್ಧಾಂತವನ್ನು ಒಪ್ಪಿಕೊಂಡಿದ್ದೇವೆ, ನಾವು ಒಟ್ಟಾಗಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಉಪಹಾರದ ಬಳಿಕ ಹೇಳಿದರು.


