Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜಕೀಯ

ರಾಜಕೀಯ ಭವಿಷ್ಯ ಇರುವುದು ಪಕ್ಷದಲ್ಲಿ, ಮಾಧ್ಯಮಗಳ ಮುಂದೆ ಅಲ್ಲ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
dk shivakumar

ಬೆಂಗಳೂರು: ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ” ಎಂದರು.

ಶಾಸಕರು ದೆಹಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಕೇಳಿದಾಗ, “ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು. ಈ ಹಿಂದೆ ಈ ರೀತಿ ನಡೆದಿದೆ. ಆದರೆ ಇದು ಸಮಯವಲ್ಲ. ಇನ್ನೂ ಚುನಾವಣೆಗಳು ನಡೆಯುತ್ತಿವೆ. ಒಂದಷ್ಟು ಜನ ತಮಿಳುನಾಡಿಗೆ ತೆರಳಿದ್ದಾರೆ. ಮೊದಲು ಚುನಾವಣೆ ಆಗಲಿ, ಆನಂತರ ಇದರ ಬಗ್ಗೆ ಯೋಚಿಸೋಣ” ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ” ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment