Tuesday, 17 November 2026 — Kannadavahini
BREAKING NEWS
ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್
ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಕೆ ಶಿವಕುಮಾರ್ ವಾಗ್ದಾಳಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 34 ವೀಕ್ಷಣೆಗಳು
dk shivakumar

ಬೆಂಗಳೂರು: “ಕೇಂದ್ರ ಬಿಜೆಪಿ ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌, “ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೊಟೇಲ್ ಗಳು ಬಂದ್ ಆಗುತ್ತಿವೆ. ಜನ ವಿದ್ಯುತ್ ಒಲೆ ಬಳಸುವ ಅನಿವಾರ್ಯತೆ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ 10% ಏರಿಕೆಯಾಗಿದೆ. ಕೇಂದ್ರ ಸರ್ಕಾರ ಜನರಿಗೆ ಸೌದೆ ಭಾಗ್ಯ ನೀಡಿದ್ದು, ಎಲ್ಲಿಂದ ಸೌದೆ ಒದಗಿಸುವುದು?” ಎಂದು ಲೇವಡಿ ಮಾಡಿದರು.

“ಯುದ್ಧಗಳ ನೆಪ, ಕೇಂದ್ರ ಸರ್ಕಾರದ ತಪ್ಪು ನಿರ್ಧಾರ, ನೀತಿಗಳಿಂದಾಗಿ ಇಂದು ದೇಶದ ಜನ ಬೆಲೆ ಏರಿಕೆಯಿಂದ ನರಳುತ್ತಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾತ್ರವಲ್ಲ, ಟೋಲ್ ಶುಲ್ಕ, ರೈಲ್ವೇ ಟಿಕೆಟ್ ದರ ಎಲ್ಲವೂ ಹೆಚ್ಚಾಗಿದೆ. ಕೆಲವು ಅನಿವಾರ್ಯ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಬೆಲೆ ಏರಿಕೆ ತೀರ್ಮಾನ ಮಾಡಿದಾಗ ಯಾವ ರೀತಿ ಟೀಕೆ ಟಿಪ್ಪಣಿ ಬಂದಿವೆ ಎಂದು ಎಲ್ಲರಿಗೂ ಗೊತ್ತಿದೆ. ಸಾಮಾನ್ಯ ಜನರ ಮೇಲೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಯುದ್ಧ ಮಾಡುತ್ತಿದೆ” ಎಂದರು.

“ಜನರನ್ನ ಕೇಂದ್ರ ಸರ್ಕಾರ ಫೂಲ್ ಮಾಡುತ್ತಿದೆ. ನಾವು ಪಾದಯಾತ್ರೆ ಮಾಡಿದಾಗ ಈ ಬೆಲೆ ಏರಿಕೆ ಸಮಸ್ಯೆಯಿಂದ ಜನರು ಕಂಗೆಟ್ಟಿದ್ದು, ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ನೀಡಿ ಅವರಿಗೆ ಶಕ್ತಿ ತುಂಬಿದ್ದೇವೆ. ಈಗ ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕವಾಗಿ ರಕ್ಷಣೆ ನೀಡಿವೆ” ಎಂದು ಹೇಳಿದರು.

“900 ಔಷಧಗಳ ದರ ಏರಿಕೆ ಮಾಡಲಾಗಿದೆ. 12% ಜಿಎಸ್ ವಿಧಿಸಲಾಗಿದೆ. ಎನ್ ಪಿಪಿಎ ಬೆಲೆ ಏರಿಕೆ ಮಾಡಿ ಇವುಗಳಿಗೆ ಶೇ 10.7 ರಷ್ಟು ಇದ್ದ ತೆರಿಗೆಯನ್ನು ಶೇ 12 ಕ್ಕೆ ಏರಿಕೆ ಮಾಡಲಾಗಿದೆ. ಅಗತ್ಯ ವಸ್ತುಗಳಾದ ಪ್ಲಾಸ್ಟಿಕ್ ಪೈಪ್ ಸೇರಿದಂತೆ ಇತರೇ ವಸ್ತುಗಳ ಬೆಲೆಯನ್ನು ಟನ್ ಗೆ 7 ಸಾವಿರ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಲೋಕೋಪಯೋಗಿ ಇಲಾಖೆಯಿಂದ ಬಿಟುಮಿನ್ ಹಾಕಲು ಟೆಂಡರ್ ಕರೆಯಲಾಗಿದೆ. ಈಗಾಗಲೇ ಕೆಲಸ ಪ್ರಾರಂಭ ಮಾಡಲಾಗಿದೆ. ಬೆಲೆ ಹೆಚ್ಚಳದಿಂದ ಕೆಲಸ ನಿಲ್ಲಿಸುವುದು ಬೇಡ ಸರ್ಕಾರವೇ ನೇರವಾಗಿ ಬಿಟುಮಿನ್ ಅನ್ನು ಸರಬರಾಜು ಮಾಡಲಿದೆ ಎಂದು ಬೆಂಗಳೂರಿನ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದರು.

ಸಿಮೆಂಟ್, ಕಬ್ಬಿಣ ಬೆಲೆ ಹೆಚ್ಚಳ

“ಸಿಮೆಂಟ್ ಬೆಲೆಯೂ ಸಹ 50 ರಿಂದ 100 ರೂಪಾಯಿಗೆ ಹೆಚ್ಚಳವಾಗಿದೆ. ಇದರ ಹಿಂದೆ ದೊಡ್ಡ ಸಿಮೆಂಟ್ ಮಾಫಿಯಾವೇ ಇದೆ. ಇದನ್ನು ಯಾರು ನಿಯಂತ್ರಣ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ‌. ಕಬ್ಬಿಣದ ಬೆಲೆ 47 ಸಾವಿರದಿಂದ 59 ಸಾವಿರಕ್ಕೆ ಹೆಚ್ಚಳವಾಗಿದೆ. ಹೀಗಾದರೆ ಜನಸಾಮಾನ್ಯ ಮನೆ ಕಟ್ಟುವುದು ಹೇಗೆ. ಇದಿರಿಂದ ಸರ್ಕಾರದ ಕಾಮಗಾರಿಗಳಿಗೂ ಹಿನ್ನಡೆಯಾಗುತ್ತಿದೆ. ಅಲ್ಲದೇ ಇದ್ದಕ್ಕಿದ್ದಂತೆ ವಿಮಾನ ಪ್ರಯಾಣದರವನ್ನ ಶೇ 18 ರಷ್ಟು ಏರಿಕೆ ಮಾಡಲಾಗಿದೆ” ಎಂದು ಹೇಳಿದರು.

“ಅರಣ್ಯಗಳಿಗೆ ಜನರು ಹೋಗಬಾರದು ಎಂದು ಹೇಳಿರುವ ಕಾರಣಕ್ಕೆ ಸೌದೆ ಅಭಾವ ನಿಜಕ್ಕೂ ಹೆಚ್ಚಾಗಲಿದೆ. ಹಳ್ಳಿಗಳಲ್ಲೂ ಸಹ ಗ್ಯಾಸ್ ಬಳಕೆ ಹೆಚ್ಚಾಗಿ ಜನ ಸೌದೆ ಬಳಸುತ್ತಿಲ್ಲ. ಒಮ್ಮೆಲೆ ಬಳಕೆ ಹೆಚ್ಚಾದರೆ ಅಭಾವ ಉಂಟಾಗಲಿದೆ. ಬ್ಲಾಕ್ ಮಾರ್ಕೆಟ್ ಕೆಲಸ ಮಾಡುತ್ತಿದ್ದು 2 ಸಾವಿರದವರೆಗೆ ಗೃಹಬಳಕೆ ಗ್ಯಾಸ್, 4 ಸಾವಿರದವರೆಗೆ ಕಮರ್ಷಿಯಲ್ ಗ್ಯಾಸ್ ಬೆಲೆ ಹೆಚ್ಚಾಗಿದೆ” ಎಂದರು.

ಕೇಂದ್ರ ಪರ್ಯಾಯ ವ್ಯವಸ್ಥೆ ಮಾಡಲಿ

“ಶೇ 34 ರಷ್ಟು ಪೋಸ್ಟಲ್ ಹಾಗೂ ಪಾರ್ಸಲ್ ಚಾರ್ಜ್ ಹೆಚ್ಚಳ ಮಾಡಿದ್ದಾರೆ. ಹೀಗಾದರೆ ಸಾಮಾನ್ಯ ಜನ ಹೇಗೆ ಬದುಕಬೇಕು. ಅಚ್ಚೇದಿನ ಏನಾಯಿತು‌. ಹೀಗೆ ಮುಂದುವರೆದರೆ ಜನಸಮಾನ್ಯರು ಹೇಗೆ ಬದುಕಬೇಕು. ನಾವು ಗ್ಯಾರಂಟಿ ನೀಡಿದ ಕಾರಣಕ್ಕೆ ಜನ ಸ್ವಲ್ಪ ಉಸಿರಾಡುತ್ತಿದ್ದಾರೆ. ಇದೇ ರೀತಿ ಕೇಂದ್ರ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು.‌ ಜನಸಾಮಾನ್ಯರ ಬವಣೆಯ ಜೊತೆ ಕೇಂದ್ರ ನಿಲ್ಲುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಆಗ್ರಹಿಸುತ್ತೇವೆ” ಎಂದರು.

“ಮೋದಿ ಸರ್ಕಾರ ಪ್ರತಿನಿತ್ಯ ಜನರ ಜೋಬಿನಿಂದ ಪಿಕ್ ಪಾಕೆಟ್ ಮಾಡುತ್ತಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೇಂದ್ರ ಸರ್ಕಾರ 900 ಕೋಟಿ ವಸೂಲಿ ಮಾಡಿದೆ. ಕೇಂದ್ರ ಸರ್ಕಾರ ಅದೇ ಹಣ ನಮಗೆ ಕೊಟ್ಟರೆ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಮಾಡಬಹುದು” ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8421 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment