Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜಕೀಯ

ರಾಜ್ಯದಲ್ಲಿ 2 ವರ್ಷದಲ್ಲಿ 5,394 ರೈತರ ಆತ್ಮಹತ್ಯೆ: ಎಚ್.ಡಿ. ಕುಮಾರಸ್ವಾಮಿ ಆರೋಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 27 ವೀಕ್ಷಣೆಗಳು
hd kumarswamy

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.  ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರ್ಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯ ಸರಕಾರಕ್ಕೆ ಈ ಅಂಕಿ ಅಂಶಗಳು ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮುಚ್ಚಿಟ್ಟಿದಿಯ ಎನ್ನುವ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.

ಇಷ್ಟು ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು.

ಕೇವಲ ಹತ್ತು ನಿಮಿಷಗಳ ಕಾಲ ಮಳೆ ಬಂದರೆ ಇಲ್ಲಿ ನೋಡಿದರೂ ನೀರು ನಿಲ್ಲುತ್ತದೆ. ಈ ಸಮಾವೇಶಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಮಾಡಿದೆ. ಜನರನ್ನೂ ಸರಕಾರವೇ ಕರೆತರಬೇಕು. ಅದಕ್ಕೆ ಅಧಿಕಾರಿಗಳಿಗೆ ಇಂತಿಷ್ಟು ಜನರನ್ನು ಕರೆದುಕೊಂಡು ಬರುವುದಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಕಾಂಗ್ರೆಸ್ ನವರ ಕಾರ್ಯಕ್ರಮಗಳಿಗೆ ಜನ ಬರಬೇಕಲ್ಲ, ಅದಕ್ಕಾಗಿ ಅಧಿಕಾರಿಗಳನ್ನು ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಸರಕಾರ ರೈತರ ಜೀವನದ ಮೇಲೆ ಸಮಾಧಿ ಕಟ್ಟಿ, ಅದರ ಮೇಲೆ ತಮ್ಮ ವೈಭವ ಪ್ರದರ್ಶನ ಮಾಡುತ್ತಿದ್ದಾರೆ. ಇವರನ್ನು ಜನ ಕ್ಷಮಿಸುವುದಿಲ್ಲ. ಒಂದೆಡೆ ರೈತರು ನಿತ್ಯವೂ ಸಾಯುತ್ತಿದ್ದಾರೆ ಇವರು ಗ್ಯಾರಂಟಿ ಹೆಸರಿನಲ್ಲಿ ಹಬ್ಬ ಮಾಡುತ್ತಿದ್ದಾರೆ. ಇವರ ಗ್ಯಾರಂಟಿಗಳು ಉತ್ತಮವಾಗಿ ಇದ್ದಿದ್ದರೆ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಮಾವೇಶದ ಹೆಸರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಕಳೆದ ವರ್ಷ ಕೂಡ ಹಕ್ಕು ಪತ್ರಗಳ ಬಗ್ಗೆಯೇ ಹೆಚ್ಚು ಚರ್ಚೆ ಮಾಡಿದ್ದರು. ನಮ್ಮ ಬಳಿ ಬರುವ ರೈತರು ಹಾಗೂ ಅನೇಕ ಜಿಲ್ಲೆಗಳಲ್ಲಿ ನಾವು ಹೋದಾಗ ಕಂದಾಯ ಇಲಾಖೆಯ ಬಗ್ಗೆಯೇ ಹೆಚ್ಚು ದೂರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಇವರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರೈತ ಆತ್ಮಹತ್ಯೆ ಪ್ರಕರಣಗಳು ಇವರ ಯೋಗ್ಯತೆಯನ್ನು ಸಾರಿ ಸಾರಿ ಸಾರಿ ಹೇಳುತ್ತಿವೆ ಎಂದು ಸಚಿವರು ಅಕ್ರೋಶ ವ್ಯಕ್ತಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment