Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

5 ಬಾರಿ ಸಾವಿನ ಹತ್ತಿರ ಹೋಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ ಭಾವುಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 29 ವೀಕ್ಷಣೆಗಳು
hd kumarswamy

ತುಮಕೂರು: ನಾನು ಐದು ಬಾರಿ ಸಾವಿನ ಹತ್ತಿರಕ್ಕೆ ಹೋಗಿ ಬಂದಿದ್ದೇನೆ. ದೇವರ ಆಶೀರ್ವಾದದಿಂದಲೇ ನಾನು ಇನ್ನೂ ಬದುಕಿದ್ದೇನೆ ಎಂದು ಭಾವಿಸಿದ್ದೇನೆ. ನಮಗೆ ಒಂದು ಅವಕಾಶ ಕೊಡಿ. 5 ವರ್ಷಗಳ ಉತ್ತಮ ಸರ್ಕಾರ ನೋಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ರಾಗಿಮುದ್ದೆನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀಮಾರಮ್ಮ ಅಮ್ಮನವರ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಜೆಡಿಎಸ್ ಬಿಜೆಪಿ ಸರ್ಕಾರ ಅಲ್ಲ, ಆರೂವರೆ ಕೋಟಿ ಕನ್ನಡಿಗರ ಸರ್ಕಾರ ತರುತ್ತೇವೆ. ಅದಕ್ಕೆ ಅವಕಾಶ ಕೊಡಿ ಎಂದರು.

ಎರಡು ಬಾರಿ ನಾನು ಮುಖ್ಯಮಂತ್ರಿ ಆಗಿದ್ದೆ. ನಾನು ಜನತೆಗೆ ದ್ರೋಹ ಬಗೆಯದೇ ಕೆಲಸ ಮಾಡಿದ್ದೇನೆ. ನನ್ನ ಆತ್ಮಕ್ಕೆ ತೃಪ್ತಿಯಾಗುವ ರೀತಿಯಲ್ಲಿ ನಾನು ಜನರ ಸೇವೆ ಮಾಡಿದ್ದೇನೆ. ಬೇರೆಯವರ ಕುತಂತ್ರದಿಂದ ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡಲು ಆಗಲಿಲ್ಲ. ನನ್ನ ತಪ್ಪಿನಿಂದ ಆಗಿದ್ದಲ್ಲ. ಅವಕಾಶ ಸಿಕ್ಕಿದಾಗ ಸಾಕಷ್ಟು ಕೆಲಸ ಮಾಡಿದ್ದೇನೆ. ಸಾಲ ಮನ್ನಾ ಎರಡು ಅವಧಿಗಳಲ್ಲಿಯೂ ಮಾಡಿದ್ದೇನೆ. ಕೇಂದ್ರ ಸಹಕಾರ ಕೊಡುವುದಿಲ್ಲ ಎನ್ನುವುದು ತಪ್ಪು, ನಮ್ಮ ನಡವಳಿಕೆ ಮೇಲೆ ಎಲ್ಲವೂ ನಿಂತಿರುತ್ತದೆ. ನಾನು ಎರಡು ಬಾರಿ ಸಾಲ ಮನ್ನಾ ಮಾಡಿದಾಗ ನಾನು ಕೇಂದ್ರದ ಕಡೆ ನೋಡಲಿಲ್ಲ. ರಾಜ್ಯದ ಖಜಾನೆಯಿಂದ ಹಣ ನೀಡಿ ಸಾಲ ಮನ್ನಾ ಮಾಡಿದೆ. ಇವರು ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ. ಇದು ಸರಿಯಲ್ಲ ಎಂದು ಅವರು ಹೇಳಿದರು.

ಎರಡು ಸಾವಿರಕ್ಕೆ ಮರುಳಾಗಬೇಡಿ

ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ, ಈ ಗ್ಯಾರಂಟಿಗಳು ನಿಮ್ಮ ಬದುಕಿಗೆ ಶಾಶ್ವತ ಪರಿಹಾರ ಅಲ್ಲ. ಕಾಂಗ್ರೆಸ್ ಸರಕಾರದ ಮೋಸಕ್ಕೆ ಬಲಿಯಾಗಬೇಡಿ ಎಂದು ಹೆಚ್.ಡಿ. ಕುಮಾರಸ್ವಾಮಿ ಮಹಿಳೆಯರಲ್ಲಿ ಮನವಿ ಮಾಡಿದರು.

ನಿಮಗೆ ತಾತ್ಕಾಲಿಕ ಉಪಶಮನ ಅಷ್ಟೇ ಈ ಐದು ಗ್ಯಾರಂಟಿಗಳು. ಇವುಗಳಿಂದ ಏನು ಉಪಯೋಗ ಇಲ್ಲ. ಇದಕ್ಕಾಗಿ ವರ್ಷಕ್ಕೆ ₹50,000 ಕೋಟಿ ಹಣವನ್ನು ಸರ್ಕಾರ ಖರ್ಚು ಮಾಡುತ್ತಿದೆ. ನೀವು ಕಟ್ಟುವ ತೆರಿಗೆ ಹಣವನ್ನೇ ನಿಮಗೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ವಾರ್ಷಿಕ ₹1ರಿಂದ ₹1.25 ಲಕ್ಷ ಕೋಟಿ ಸಾಲ ಮಾಡುತ್ತಿದೆ. ಈ ಸಾಲವನ್ನು ಗ್ಯಾರೆಂಟಿ ಕೊಟ್ಟವರು ತೀರಿಸಲ್ಲ. ನೀವೇ ತೀರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

ಇಡೀ ರಾಜ್ಯದಲ್ಲಿ ಈ ಸರಕಾರ ಸರ್ಕಾರ ಮದ್ಯದ ಹೊಳೆ ಹರಿಸುತ್ತಿದೆ. ಹಳ್ಳಿ ಹಳ್ಳಿಯಲ್ಲಿ ಕಿರಾಣಿ ಅಂಗಡಿಗಳಲ್ಲಿ ಕೂಡ ಮದ್ಯ ದೊರೆಯುತ್ತಿದೆ. ಸಿ.ಎಲ್. 7 ಮದ್ಯ ಪರವಾನಗಿಯನ್ನು ದೊಡ್ಡ ಪ್ರಮಾಣದಲ್ಲಿ ನೀಡುತ್ತಿದ್ದಾರೆ. ಇಂಥ ಒಂದು ಲೈಸನ್ಸ್ ಕೊಡುವುದಕ್ಕೆ ಇತ್ತೀಚೆಗೆ ಅಬಕಾರಿ ಅಧಿಕಾರಿಗಳು ₹2.50 ಕೋಟಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ನಿಮ್ಮ ಗಂಡಂದಿರಿಗೆ ಚೆನ್ನಾಗಿ ಕುಡಿಸಿ ಅವರನ್ನು ಹಾಳು ಮಾಡಿ ನಿಮಗೆ ₹2000 ಗೃಹಲಕ್ಷ್ಮೀ ಹಣ ಕೊಟ್ಟರೆ ಉಪಯೋಗ ಏನು? ನಿಮ್ಮ ಹಣ ಕಿತ್ತುಕೊಂಡು ನಿಮಗೆ ಅದರಲ್ಲಿ ಅಲ್ಪ ಮೊತ್ತ ನೀಡುತ್ತಿದ್ದಾರೆ. ದಯವಿಟ್ಟು ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕರಾದ ನಿಂಗಪ್ಪ, ನಾಗಮಂಗಲದ ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ನಾಯಕರಾದ ನಾಗರಾಜು, ಉಗ್ರೇಶ, ರವಿಕುಮಾರ್, ಜಗದೀಶ್, ಡಾ.ರವಿ ಮುಂತಾದವರು ಭಾಗವಹಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment