ನಾನು ಬಂದಿರುವುದು ರಾಜಕಾರಣ ಮಾಡುವುದಕ್ಕೆ. ಗಾಳಿ ಕುಡಿಯೋಕೆ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಹೈಕಮಾಂಡ್ ಬಳಿ ಪಟ್ಟು ಹಿಡಿದಿರುವ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆ.
ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸುದೀರ್ಘ ಮಾತುಕತೆ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ವರಿಷ್ಠರ ಜೊತೆ ಎಲ್ಲ ವಿಷಯವನ್ನು ಮಾತನಾಡಿದ್ದೇನೆ. ಏನು ಹೇಳಬೇಕೋ ಹೇಳಿದ್ದೇನೆ. ಸಮಯವೇ ಉತ್ತರ ನೀಡುತ್ತದೆ ಎಂದರು.
ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ವೇಣುಗೋಪಾಲ್ ಜೊತೆ ಮಾತುಕತೆ ನಡೆಸಿರುವ ಡಿಕೆ ಶಿವಕುಮಾರ್, ಮಾತುಕತೆ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.
ನಾನು ಏನೂ ಹೇಳಬೇಕೋ ಎಲ್ಲವನ್ನೂ ಹೇಳಿದ್ದೇನೆ. ಮಾಧ್ಯಮದ ಮುಂದೆ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಯಾರ ಯಾರ ಜೊತೆ ಏನು ಮಾತುಕತೆ ವಿಷಯವನ್ನು ಹೇಳಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.


