Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜಕೀಯ

ಕುಮಾರಸ್ವಾಮಿಯನ್ನು ಮುಗಿಸಲು ಸಾಧ್ಯವಿಲ್ಲ: ಗುಡುಗಿದ ದೇವೇಗೌಡರು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
hd devegowda
hd devegowda

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗಿದರು.

ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.

ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ; ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment