Friday, February 13, 2026
Google search engine
Homeರಾಜಕೀಯಸರ್ಕಾರ 1000 ಪೂರೈಸಿದ್ದಕ್ಕಾಗಿ 6ನೇ ಗ್ಯಾರಂಟಿಯಾಗಿ ಭೂಮಿ ಯೋಜನೆ: ಡಿಕೆ ಶಿವಕುಮಾರ್ ಘೋಷಣೆ

ಸರ್ಕಾರ 1000 ಪೂರೈಸಿದ್ದಕ್ಕಾಗಿ 6ನೇ ಗ್ಯಾರಂಟಿಯಾಗಿ ಭೂಮಿ ಯೋಜನೆ: ಡಿಕೆ ಶಿವಕುಮಾರ್ ಘೋಷಣೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 1000 ದಿನ ಪೂರೈಸಿದದ ಹಿನ್ನೆಲೆಯಲ್ಲಿ 6ನೇ ಗ್ಯಾರಂಟಿ ಯೋಜನೆಯಾಗಿ ಭೂಮಿ ಗ್ಯಾರಂಟಿ ಜಾರಿಗೆ ತರಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ ಬಗ್ಗೆ ಸಂತೋಷವಿದೆ. ಈ ಅಭೂತಪೂರ್ವ ಕ್ಷಣವನ್ನು ನಾವು ಸಂಭ್ರಮಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿ ಭೂಮಿ ಗ್ಯಾರಂಟಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ ಎಂದರು.

ಭೂಮಿಯ ಹಕ್ಕು ಪತ್ರ ಇಲ್ಲದ ಲಕ್ಷಾಂತರ ಜನರಿಗೆ ನಾವು ಹಕ್ಕುಪತ್ರ, ಪಟ್ಟಾ ದಾಖಲೆ ನೀಡುತ್ತಿದ್ದೇವೆ. ಜತೆಗೆ ಜನರಿಗೆ ಪಕ್ಕಾ ಖಾತೆ ಹಂಚಿಕೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳ ಹೊರತಾಗಿ ಇದು ನಮ್ಮ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಅವರು ತಿಳಿಸಿದರು.

ಮುಂದಿನ ಒಂದು ಸಾವಿರ ದಿನ ಹೇಗಿರಲಿದೆ ಎಂಬ ಪ್ರಶ್ನೆಗೆ “ಬಹಳ ಪ್ರಕಾಶಮಾನವಾಗಿ, ಬಲಿಷ್ಠವಾಗಿರಲಿದೆ ಎಂದು ತಿಳಿಸಿದರು.

ಪ್ರಯತ್ನ ಇದ್ದಾಗ ಸದಾ ಯಶಸ್ಸು

ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, ಪಕ್ಷದ ಯಶಸ್ಸು ಹಾಗೂ ಪಕ್ಷದ ಹಿತಾಸಕ್ತಿ, ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತಾರೆ. ಮಾಧ್ಯಮಗಳು ಹಾಗೂ ಬೇರೆಯವರು ಈ ಭೇಟಿಗೆ ಹೊಸ ರೂಪ, ಬೇರೆ ಬಣ್ಣ ನೀಡುತ್ತಿದ್ದೀರಿ. ನಮಗೆ ಇದರಲ್ಲಿ ವಿಶೇಷವಿಲ್ಲ ಎಂದರು.

ದೆಹಲಿಗೆ ಬಂದ ನಂತರ ಎಲ್ಲರನ್ನೂ ಭೇಟಿ ಮಾಡುತ್ತೇನೆ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್, ಸುರ್ಜೆವಾಲ, ಟಿ.ಬಿ. ಜಯಚಂದ್ರ ಸೇರಿದಂತೆ ಎಲ್ಲರನ್ನು ಭೇಟಿ ಮಾಡಿರುವೆ. ರಾಜಕಾರಣಿಗಳು ಭೇಟಿಯಾದಾಗ ರಾಜಕಾರಣ ಚರ್ಚೆ ಮಾಡದೇ ಇರುತ್ತಾರಾ? ರಾಜಕೀಯ ಚರ್ಚೆ ಮಾಡುತ್ತೇವೆ. ಆದರೆ ಆ ಚರ್ಚೆಯ ವಿವರವನ್ನು ಮಾಧ್ಯಮಗಳ ಮುಂದೆ ಬಹಿರಂಗ ಪಡಿಸಲಾರೆ. ಕರ್ನಾಟಕದ ಹಿತ ಸೇರಿದಂತೆ ಅಸ್ಸಾಂ, ದೆಹಲಿ ಬಗ್ಗೆ ಚರ್ಚೆ ಮಾಡಿರುತ್ತೇವೆ ಎಂದಷ್ಟೇ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments