Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ: ಡಿಕೆ ಶಿವಕುಮಾರ್‌ ತಿರುಗೇಟು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
dk shivakumar

ಶಿವಮೊಗ್ಗ: ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಸವಾಲು ಹಾಕಿದ್ದಾರೆ.

ಶುಕ್ರವಾರ ಮಾಧ್ಯಮಗಳು ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಪ್ರಶ್ನಿಸಿದಾಗ, ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ ಎಂದರು.

ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ” ಎಂದು ತಿವಿದರು.

ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ ಎಂದರು.

ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment