Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ಬೆಂಗಳೂರು

ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
mallikarjun kharge
mallikarjun kharge

ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸುವುದರಿಂದ ಏನೂ ಆಗಲ್ಲ ಎಂದರು.

ಕೆಲವರು ನಾವು ಹೇಳಿದಂತೆ ಹೈಕಮಾಂಡ್ ಕೇಳುತ್ತದೆ ಎಂದು ಭಾವಿಸಿದ್ದಾರೆ. ಹೈಕಮಾಂಡ್ ಯಾವಾಗ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಆಗ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ಗೆ ಏನು ಮಾಡಬೇಕು ಎಂಬುದು ಗೊತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ನೀವು ಮಾಡಿ. ಸುಮ್ನ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಆಗಬಾರದು ಎಂದು ಖರ್ಗೆ ಹೇಳಿದರು.

ಪಕ್ಷದ ಕುರಿತು ತೀರ್ಮಾನ ಕೈಗೊಳ್ಳಲು ನಾವು ಇದ್ದೇವೆ. ಏನೇ ಇದ್ದರೂ ನಾವು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment