ಸಹಕಾರಿ ಸಚಿವ ಕೆಎನ್ ರಾಜಣ್ಣ ಮೈಸೂರಿನಲ್ಲಿ ಮಂಗಳವಾರ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಹೂಣಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 75 ವರ್ಷ ವಯಸ್ಸಾಯಿತು. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಮುಂದುವರಿಯುತ್ತೇನೆ ಎಂದರು.
ಸಹಕಾರ ಕ್ಷೇತ್ರ ಪಟ್ಟಭದ್ರರ ಹಿತಾಸಕ್ತಿಯಿಂದ ಮುಕ್ತಿ ಮಾಡಲು ಪ್ರಯತ್ನ ನಡೆದಿದೆ. ಇದಕ್ಕಾಗಿ ಕಾನೂನಿನಲ್ಲಿ ತಿದ್ದುಪಡಿ ತರಲು ಚಿಂತನೆ ನಡೆದಿದ್ದು, ಕೇಂದ್ರದ ಪಾತ್ರ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಸಹಕಾರಿ ಕ್ಷೇತ್ರದ ತಿದ್ದುಪಡಿ ವಿಧೇಯಕಗಳನ್ನು ಉಭಯ ಸದನಗಳಲ್ಲಿ ಅನುಮತಿ ಪಡೆದು ರಾಜ್ಯಪಾಲರಿಗೆ ಕಳುಹಿಸಿದರೆ ರಾಜ್ಯಪಾಲರು ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಸಹಕಾರಿ ಕ್ಷೇತ್ರದ ಕಾನೂನು ರೂಪಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಇದೆ. ಇದರಲ್ಲಿ ಕೇಂದ್ರದ ಸಲಹೆ ಅಥವಾ ಯಾವುದೇ ಪಾತ್ರ ನಿರ್ವಹಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.


