ಆಪ್ತರಿಂದ ಅತ್ಯಾಚಾರ ಮಾಡಿಸಿದ್ದೂ ಅಲ್ಲದೇ ಮುಖದ ಮೇಲೆ ಮೂರ್ತ ವಿಸರ್ಜನೆ ಮಾಡಿಸಿ ಬಿಜೆಪಿ ಶಾಸಕ ಮುನಿರತ್ನ ಹೀನಾಯವಾಗಿ ನಡೆಸಿಕೊಂಡಿದ್ದು, ಈ ಅಪಮಾನ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತೆ ವೀಡಿಯೋದಲ್ಲಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಮೇಲೆ ಈಗಾಗಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಗಂಭೀರ ಆರೋಪಗಳಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಈ ವೇಳೆಯೇ ಮುನಿರತ್ನ ಮೇಲೆ ಮತ್ತೊಂದು ಗಂಭೀರ ಬಂದಿದೆ.
ಮುನಿರತ್ನ ಮೇಲೆ ಗಂಭೀರ ಆರೋಪ ಮಾಡಿರುವ ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.
ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದರಿಂದ ನೊಂದ ಬಿಜೆಪಿ ಕಾರ್ಯಕರ್ತೆ ಪೊಲೀಸರಿಗೆ ಹಲವಾರು ಬಾರಿ ದೂರು ನೀಡಿದ್ದರು. ಅಲ್ಲದೇ ಆಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ದೂರು ನೀಡಿದ್ದರು.
ನ್ಯಾಯ ಸಿಗದೇ ಪರಿತಪಿಸುತ್ತಿದ್ದ ಮಹಿಳೆ ಮೇಲೆ ಆಕ್ರೋಶಗೊಂಡಿದ್ದ ಮುನಿರತ್ನ ಆಪ್ತರ ಮೂಲಕ ಅತ್ಯಾಚಾರ ಎಸಗಿದ್ದೂ ಅಲ್ಲದೇ ಅಸಭ್ಯವಾಗಿ ನಡೆದುಕೊಂಡು ಅಪಮಾನ ಮಾಡಿದ್ದರು ಎಂದು ಆರೋಪಿಸಲಾಗಿದೆ.


