Home ರಾಜಕೀಯ ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

by Editor
0 comments
nikil kumarswamy

ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.

ಉಪ ಚುನಾವಣೆಯಲ್ಲಿ ಇಂಥ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ 48 ಗಂಟೆಗಳಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಗೃಹಲಕ್ಷಿ ಹಣ ಒಟ್ಟಿಗೆ ಜಮೆ ಮಾಡಿದ್ದಾರೆ. ಅದನ್ನು ಪ್ರಶ್ನೆ ಮಾಡಬೇಕಿದೆ.  ಸರ್ಕಾರ ಆಡಳಿತವನ್ನು ಎಷ್ಟರಮಟ್ಟಿಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೆ ಎಂದರು.

ಮೈತ್ರಿಕೂಟದ ಎಲ್ಲಾ ನಾಯಕರ ಅಣತಿಯಂತೆ ಕೊನೆ ಕ್ಷಣದಲ್ಲಿ ನಾನು ಸ್ಪರ್ಧೆ ಮಾಡಬೇಕಾಯಿತು. ಕೇವಲ 15 ದಿನಗಳು ಮಾತ್ರ ಚುನಾವಣೆ ನಡೆಸಲು ನಮ್ಮ ಬಳಿ ಸಮಯವಿತ್ತು.ಅವರಿಗೆ ಸಾಕಷ್ಟು ಸಮಯ ಸಿಕ್ಕಿತ್ತು, ನಮ್ಮ ಕಡೆ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಯಿತು. ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

banner

ಒಂದು ಸಮುದಾಯಕ್ಕೆ ದೇವೇಗೌಡರು ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ನಮ್ಮ ಕೈ ಹಿಡಿಯಲಿಲ್ಲ. ನಾಗಮಂಗಲದಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಸಂಘರ್ಷದಲ್ಲಿ ಹಾನಿ ಉಂಟಾದ ಅಂಗಡಿ ಜನರಿಗೆ ಕುಮಾರಸ್ವಾಮಿ ಅವರು ಪರಿಹಾರ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೂ ಪರಿಹಾರ ನೀಡಿದ್ದಾರೆ. ಚನ್ನಪಟ್ಟಣದ ಇತಿಹಾಸದಲ್ಲಿಯೇ 1200 ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಸೋತಿದ್ದೇವೆ, ಇದೊಂದು ನಮಗೆ ಪಾಠ ಎಂದರು ಅವರು.

ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ ಅರಿವಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ತಳಮಟ್ಟದ ಕಾರ್ಯಕರ್ತರನ್ನು  ಗುರುತಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುತ್ತೇನೆ. ಅವರ ಜತೆಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದಾರೆ, ಹಿರಿಯ ನಾಯಕರ ಮಾರ್ಗದರ್ಶನದಿಂದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ನಿಖಿಲ್ ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!