Home ರಾಜಕೀಯ ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

by Editor
0 comments
siddaramiah

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊAದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

banner

ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ರಾಜ್ಯ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯಥಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ World news 1500 ಕ್ರಿಮಿನಲ್ ಗಳಿಗೆ ಕ್ಷಮಾದಾನ ಘೋಷಿಸಿದ ಜೋ ಬಿಡೈನ್! 22,000 ಕೋಟಿ ವೆಚ್ಚದಲ್ಲಿ Su-30 ಫೈಟರ್ ಜೆಟ್ಸ್, ಕೆ-9 ಹೌಥಿಜೆರ್ಸ್ ಖರೀದಿಗೆ ಕೇಂದ್ರ ಸಂಪುಟ ಅಸ್ತು! Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ! 18 ವರ್ಷದ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್! ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ! ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು! ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್ BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ!