Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ರಾಜಕೀಯ

ನರೇಗಾ ರದ್ದು ವಿರುದ್ಧ ಗ್ರಾ.ಪಂ ಮಟ್ಟದಿಂದಲೂ ಪ್ರತಿಭಟನೆ: ಸಚಿವ ಮಧು ಬಂಗಾರಪ್ಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 28 ವೀಕ್ಷಣೆಗಳು
madhu bangarappa

ಶಿವಮೊಗ್ಗ: ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ಗ್ರಾ.ಪಂ. ಮಟ್ಟದಿಂದ ಕಾಂಗ್ರೆಸ್ ಹೋರಾಟವನ್ನು ಕೈಗೆತ್ತಿಕೊಳ್ಳುತ್ತದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಯೊಂದು ಹಂತದಲ್ಲೂ ಗಾಂಧೀಜಿಯವರ ಹೆಸರನ್ನೇ ನಾಶಮಾಡಲು ಹೊರಟಿದೆ. ಹೇ ರಾಮ್ ಎಂದು ಹೇಳಿದ್ದ ಗಾಂಧೀಜಿಯವರನ್ನೇ ನಾಶಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಇದಕ್ಕೆ ಟೀಕಿಸಿದರೆ ಅವರು ಹಾರಿಕೆಗಳ ಉತ್ತರಗಳನ್ನು ಕೊಡುತ್ತಾರೆ. ಗಾಂಧೀಜಿಯವರು ಕಂಡ ಗ್ರಾಮೀಣ ಅಭಿವೃದ್ಧಿಯ ಕನಸುಗಳೇ ನುಚ್ಚು ನೂರಾಗುತ್ತಿವೆ. ಮನರೇಗಾ ಯೋಜನೆಯನ್ನು ರದ್ದುಪಡಿಸುವ ಮೂಲಕ ಗ್ರಾಮ ಪಂಚಾಯ್ತಿಗಳಿಗೆ ನೀಡಿದ್ದ ಶಕ್ತಿಯನ್ನೇ ಅದು ಕಸಿದುಕೊಳ್ಳುತ್ತಿದೆ. ಗೋಡ್ಸೆಯವರು ಒಂದು ಬಾರಿ ಗಾಂಧೀಜಿಯವರನ್ನು ಕೊಂದರೆ ಈ ಬಿಜೆಪಿಯವರು ಪ್ರತಿದಿನ ಗಾಂಧೀಜಿಯವರನ್ನು ಹತ್ಯೆ ಮಾಡುತ್ತಿದ್ದಾರೆ ಇವರೇ ನಿಜವಾದ ದೇಶದ್ರೋಹಿಗಳು. ನಮ್ಮ ಹೃದಯದಲ್ಲಿ ರಾಮನೂ ಇದ್ದಾನೆ. ಕೃಷ್ಣನೂ ಇದ್ದಾನೆ. ಜೊತೆಗೆ ರಹೀಂಮನೂ ಇದ್ದಾನೆ ಎಂದರು.

ಉದ್ಯೋಗಖಾತ್ರಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಉದ್ಯೋಗದಾತರಿಗೆ ಕೆಲಸವನ್ನು ನೀಡಿತ್ತು. ಬಡವರಿಗೆ ಶ್ರಮಿಕರಿಗೆ ಉದ್ಯೋಗ ನೀಡಿತ್ತು. ದುಡಿಯುವ ಕೈಗಳಿಗೆ ಕೆಲಸ ಕೊಟ್ಟಿತ್ತು. ಇದೊಂದು ಅದ್ಬುತವಾದ ಯೋಜನೆಯಾಗಿತ್ತು. ಈಗ ಈ ಯೋಜನೆಯನ್ನೇ ರದ್ದುಪಡಿಸಿ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಇದೀಗ ಗ್ರಾಮ ಪಂಚಾಯ್ತಿಗಳ ಕಾಮಗಾರಿಗಳು ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಅವಲಂಭಿತವಾಗಲಿದೆ. ಕೇಂದ್ರ ಸರ್ಕಾರದಿಂದ ಅಧಿಸೂಚಿಸಲ್ಪಟ್ಟ ಗ್ರಾಮಗಳಲ್ಲಿನ ಕಾರ್ಮಿಕರು ಮಾತ್ರ ಇದರ ಲಾಭ ಪಡೆಯುತ್ತಾರೆ. ಅಧಿಸೂಚನೆಯಿಂದ ಹೊರಗುಳಿದ ಗ್ರಾಮಗಳ ಕಾರ್ಮಿಕರು ಉದ್ಯೋಗದಿಂದ ವಂಚಿತರಾಗುತ್ತಾರೆ. ಮತ್ತು ಎಲ್ಲಾ ದಿನಗಳಲ್ಲೂ ಕೆಲಸ ಸಿಗುವುದಿಲ್ಲ. ಅಲ್ಲದೆ ಕೂಲಿಗೆ ಕಾತರಿಯೂ ಇಲ್ಲ. ಇದು ಕೇವಲ ಕೇಂದ್ರ ಸರ್ಕಾರ ಪಂಚಾಯ್ತಿಗಳಿಗೆ ನೀಡುವ ಅನುದಾನದ ಮೇಲೆ ನಿರ್ಧಾರವಾಗುತ್ತದೆ ಎಂದು ಆರೋಪಿಸಿದರು.

ಈ ಯೋಜನೆಯ ವೇತನವನ್ನು ಈ ಹಿಂದೆ ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಈಗ ವೇತನವನ್ನು ವಿಭಜಿಸಿ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40ರಷ್ಟು ನೀಡಬೇಕಾಗಿದೆ. ಕರ್ನಾಟಕ ರಾಜ್ಯವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೇಂದ್ರದಿಂದ ಬರುವ ಅನುದಾನದ ಕೊರತೆಯಿದೆ. ಇವು ಹೇಗೆ ತಾನೇ ಹೆಚ್ಚುವರಿ ಹೋರಲು ಸಾಧ್ಯ ? ಅಲ್ಲದೆ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಕೊಡುತ್ತಿಲ್ಲ. ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಕೂಡ ಅದು ಮಲತಾಯಿ ಧೋರಣೆ ತೋರುತ್ತಿದೆ. ಈಗ ಇದು ಮತ್ತೊಂದು ಹೊರೆಯಾಗಲಿದೆ ಎಂದು ದೂರಿದರು.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಜಿ ರಾಮ್‌ಜೀ ಯೋಜನೆಯಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತದೆ. ಕನಿಷ್ಠ ವೇತನದ ರಕ್ಷಣೆಯಿಲ್ಲದೆ ಕಾರ್ಮಿಕರು ಸಂಕಷ್ಟು ಅನುಭವಿಸುತ್ತಾರೆ. ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆಯಾಗುತ್ತದೆ. ಪಂಚಾಯ್ತಿಗಳು ಕೇವಲ ಅನುಷ್ಟಾನಗೊಳಿಸುವ ಸಂಸ್ಥೆಗಳಾಗುತ್ತವೆ. ದಲಿತ ಮತ್ತು ಆದಿವಾಸಿ ಸೇರಿದಂತೆ ಅನೇಕ ಬಡಕುಟುಂಬಗಳ ಮೇಲೆ ಅಧಿಕ ಒತ್ತಡ ಸೃಷ್ಟಿಯಾಗುತ್ತದೆ ಎಂದು ದೂರಿದರು.

ಆದ್ದರಿಂದ ವಿಕಸಿತ ಭಾರತ್ ಜಿ ರಾಮ್‌ಜೀ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ನರೇಗಾ ಯೋಜನೆಯನ್ನೇ ಮುಂದುವರಿಸಬೇಕು. ಜನರ ಉದ್ಯೋಗದ ಹಕ್ಕನ್ನು ಪುನರ್‌ಸ್ಥಾಪಿಸಬೇಕು. ಗ್ರಾ.ಪಂ.ಗಳನ್ನು ಗಟ್ಟಿಗೊಳಿಸಬೇಕು. ಮಾನವ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಬೇಕು, ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಗ್ರಾಮ ಪಂಚಾಯ್ತಿ ಮಟ್ಟದಿಂದ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.

ಕೇರಳದಲ್ಲಿರುವ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಹೇರಿಕೆ ಮಾಡಲಾಗಿದೆ. ಈ ಕುರಿತು ಸರ್ಕಾರದ ಜೊತೆ ಸಮಾಲೋಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾಗೇಣಿ ಜಮೀನಿಗೆ ಸಂಬಂಧಿಸಿದಂತೆ ಕಾಯ್ದೆ ರೂಪಿಸಲು ಈಗಾಗಲೇ ಯೋಚಿಸಿದ್ದು ಕಾನೂನು ಇಲಾಖೆಯ ಅಭಿಪ್ರಾಯವನ್ನು ಕೇಳಲಾಗಿದೆ.

1995ರ ನಂತರ ಆರಂಭವಾದ ಶಾಲೆಗಳಿಗೆ ಅನುದಾನ ನೀಡಲು ಹಣಕಾಸು ಇಲಾಖೆಗೆ ಸೂಚಿಸಲಾಗಿದೆ. ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹೆಚ್ಚಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೇವಲ ಶಿವಮೊಗ್ಗ ಜಿಲ್ಲೆಯವರು ಮಾತ್ರ ಇಲ್ಲ, ಸುಮಾರು 27 ತಾಲ್ಲೂಕುಗಳ ವ್ಯಾಪ್ತಿ ಇಲ್ಲಿದೆ. ಹಾಗಾಗಿ ಈ ಸಂಖ್ಯೆ ಜಾಸ್ತಿಯಾಗಿದೆ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರುಗಳಾದ ಆರ್. ಪ್ರಸನ್ನಕುಮಾರ್, ಚೇತನ್‌ಗೌಡ, ರಮೇಶ್ ಶಂಕರಘಟ್ಟ, ಚಂದ್ರಭೂಪಾಲ್, ವೈ.ಹೆಚ್. ನಾಗರಾಜ್, ಜಿ.ಡಿ. ಮಂಜುನಾಥ್, ಶರತ್ ಮರಿಯಪ್ಪ, ರವಿಕುಮಾರ್, ದೇವಿಕುಮಾರ್, ಕಲಗೋಡು ರತ್ನಾಕರ್, ಸೈಯದ್ ವಾಹಿದ್ ಅಡ್ಡು, ಚಿನ್ನಪ್ಪ, ಯು. ಶಿವಾನಂದ್ ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment