Home ಬೆಂಗಳೂರು ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

by Editor
0 comments
R Ashok

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ ಎಂದರು.

ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ತಿಳಿಸಿದರು.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ವರ್ಗಾವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ ಎಂದರು.

banner

ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್‌ ಚಿಟ್‌ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ. ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಯನಾಡು ಭೂಕುಸಿತ ಸಂತ್ರಸ್ತರಿಗೆ `ಕೈ’ ಕೊಟ್ಟ ಕೇಂದ್ರ! ಐಫೋನ್, ಅಂಡ್ರಾಯ್ಡ್ ಗ್ರಾಹಕರಿಗೆ ಭಿನ್ನ ದರ: ಓಲಾ, ಉಬರ್‌ಗೆ ಕೇಂದ್ರ ನೋಟಿಸ್ ವನಿತೆಯರ ಕಿರಿಯರ ವಿಶ್ವಕಪ್: ಸೂಪರ್ ಸಿಕ್ಸ್ ಗೆ ಭಾರತ ಲಗ್ಗೆ ರಣಜಿಯಲ್ಲೂ ಕೈಕೊಟ್ಟ ಬ್ಯಾಟಿಂಗ್ ದಿಗ್ಗಜರು: ಮಿಂಚಿದ ಜಡೇಜಾ ಏಪ್ರಿಲ್ ಅಂತ್ಯದೊಳಗೆ 3000 ಲೈನ್ ಮೆನ್ ಗಳ ನೇಮಕ: ಸಚಿವ ಕೆಜೆ ಜಾರ್ಜ್ ಘೋಷಣೆ Raichur ಟ್ರ್ಯಾಕ್ಟರ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆಯ 9 ಕಾರ್ಯಕರ್ತರು ಅರೆಸ್ಟ್ ರಣಜಿ ಟ್ರೋಫಿ: ಪಂಜಾಬ್ 55 ರನ್ ಗೆ ಆಲೌಟ್, ಕರ್ನಾಟಕಕ್ಕೆ ಭಾರೀ ಮುನ್ನಡೆ ನೀರಾವರಿಗೆ 1274 ಕೋಟಿ ವೆಚ್ಚದ ಯೋಜನೆ ಸಿದ್ದಪಡಿಸಿದೆ: ಸಿಎಂ ಸಿದ್ದರಾಮಯ್ಯ ಸಾಲಗಾರರ ಕಾಟ ತಾಳಲಾರದೇ ಘಟಪ್ರಭಾ ಸೇತುವೆಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ!