Home ರಾಜಕೀಯ ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

by Editor
0 comments
cm siddaramiah

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳು ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷಿ ಇದೆ ಎಂದು ಪೊಲೀಸರ ಲಾಠಿಪ್ರಹಾರವನ್ನು ಸಮರ್ಥಿಸಿಕೊಂಡರು.

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

banner

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುತ್ತಿರುವ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು ಎಂದು ಅವರು ಪ್ರಶ್ನಿಸಿದರು.

ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ  ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು  2ಬಿ ಯಲ್ಲಿರುವ ಶೇ.4 ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ ಶೇ.2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ.2 ಮೀಸಲಾತಿ ನೀಡಿದರು.  ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬೆಂಗಳೂರಿಗೆ ಬಂಪರ್ ಉಡುಗೊರೆ: ಶಾಶ್ವತ ಮಳೆ ಹಾನಿ ತಡೆಗೆ 5000 ಕೋಟಿ ರೂ. ಯೋಜನೆ! ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನ ಕಡ್ಡಾಯ ಬಳಕೆಗೆ SC/ST ಕಲ್ಯಾಣ ಸಮಿತಿಯ ಮೊದಲ ವರದಿ ಶಿಫಾರಸು BIG BREAKING ನಟ ದರ್ಶನ್ ಪವಿತ್ರಾ ಗೌಡಗೆ ಬಿಗ್ ರಿಲೀಫ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಮಂಜೂರು ಪುಷ್ಪ2 ನಟ ಅಲ್ಲು ಅರ್ಜುನ್ ಅರೆಸ್ಟ್: ಆರೋಪ ಸಾಬೀತಾದರೆ 10 ವರ್ಷ ಜೈಲು? ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು ಪುಷ್ಪ-2 ಕಾಲ್ತುಳಿತ ಪ್ರಕರಣ: ವಿಚಾರಣೆಗೆ ನಟ ಅಲ್ಲು ಅರ್ಜುನ್ ಕರೆದೊಯ್ದ ಪೊಲೀಸರು! 3ನೇ ಮಹಾಯುದ್ಧಕ್ಕೆ ಮುನ್ನುಡಿ, ಯುರೋಪ್ ನಾಶ: ಬಾಬಾ ವಂಗಾ 2025ರ ಭವಿಷ್ಯ! ರಾಜ್ಯಸಭೆಯಲ್ಲಿ ಕೋಲಾಹಲ: ಸೋಮವಾರಕ್ಕೆ ಕಲಾಪ ಮುಂದೂಡಿಕೆ ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ