ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಎಸ್ ಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ನಿಗ್ರಹ ಘಟಕದಿಂದ ತನಿಖೆ ನಡೆಸಲು ಅನುಮತಿ ಕೊರಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಸಿಜೆ ಅಬ್ರಾಹಂ ೨೦೨೦ ನವೆಮಬರ್ ೧೯ರಂದು ಎಸಿಬಿಗೆ ದೂರು ನೀಡಿದ್ದರು. ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಕುಟುಂಬದವರ ವಿರುದ್ಧವೂ ದೂರು ನೀಡಿದ್ದರು ಎಂದು ಅವರು ತಿಳಿಸಿದರು.
ಈ ಹಿಂದೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ರಾಜ್ಯಪಾಲರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು ಎಂದು ಅವರು ವಿವರಿಸಿದರು.