Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ತಾಜಾ ಸುದ್ದಿ

ಸೆಪ್ಟೆಂಬರ್ 28ಕ್ಕೆ ಪಿಎಸ್ ಐ ಲಿಖಿತ ಪರೀಕ್ಷೆ ಮುಂದೂಡಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
psi exam
psi exam

ಸೆಪ್ಟೆಂಬರ್ 22ರಂದು ನಡೆಯಬೇಕಿದ್ದ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.

ಯುಪಿಎಸ್ ಸಿ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ನೇಮಕಾತಿ ಪರೀಕ್ಷೆಗಳು ಸೆಪ್ಟೆಂಬರ್ 22ರಂದೇ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಉಂಟಾಗುತ್ತಿರುವ ಗೊಂದಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೆಪ್ಟೆಂಬರ್ 28ಕ್ಕೆ ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ.

ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಬುಧವಾರ ಈ ವಿಷಯ ತಿಳಿಸಿದ್ದು, ಸೆಪ್ಟೆಂಬರ್​​ 22ರಂದು ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆ ಇದೆ.ಸೆ.22ಕ್ಕೆ ನಿಗದಿಯಾಗಿದ್ದ PSI ನೇಮಕಾತಿ ಪರೀಕ್ಷೆ ಮುಂದೂಡಲಾಗಿದ್ದು ಸೆ.28ಕ್ಕೆ ನಡೆಯಲಿದೆ ಎಂದು ಹೇಳಿದರು.

ಪಿಎಸ್ಐ ನೇಮಕಾತಿಗೆ ಕ್ರಮ‌ ತೆಗೆದುಕೊಂಡಿದ್ದೇವೆ. ಮೊದಲ ಹಂತದ 545 ಜನ ಪಿಎಸ್ಐ ಹಗರಣ ಆಗಿತ್ತು. ಅದಕ್ಕೆ ಸಂಬಂಧ ಪಟ್ಟಂತೆ ಮರು ಎಕ್ಸಾಂ ಮಾಡಿದ್ದೀವಿ. ಅದರ ಫಲಿತಾಂಶವನ್ನು ಅಂತಿಮಗೊಳಿಸಿದ್ದೇವೆ. ಆದೇಶ ಕೊಡುವ ಹಂತದಲ್ಲಿ ಇದ್ದೇವೆ ಎಂದು ಅವರು ಹೇಳಿದರು.

402 ಪಿಎಸ್​ಐ ಹುದ್ದೆಗಾಗಿ ಮತ್ತೆ ನೇಮಕಾತಿ ಮಾಡಬೇಕಾಗಿದೆ. 22 ಸೆಪ್ಟೆಂಬರ್ ಗೆ ಪರೀಕ್ಷೆ ಮಾಡಲು ತೀರ್ಮಾನಿಸಿದ್ವಿ. ಬಹಳ ಜನ ಪರೀಕ್ಷಾರ್ಥಿಗಳು 22 ರಂದು ಬೇಡ ಮುಂದೂಡುವಂತೆ ಮನವಿ ಮಾಡಿದ್ರು. ಯುಪಿಎಸ್​ಸಿ ಪರೀಕ್ಷೆ ಕೂಡ 22ಕ್ಕೆ ಇದೆ. ನಮ್ಮ ರಾಜ್ಯದಿಂದ 100ಕ್ಕೂ ಹೆಚ್ಚು ಜನ ಪ್ರಿಲಿಮಿನರಿ ಪಾಸ್ ಮಾಡಿದ್ದಾರೆ. ಅವರಿಗೆ ಅವಕಾಶ ತಪ್ಪಿಹೋಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಹಿರಿಯ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ. ಮಧು ಬಂಗಾರಪ್ಪ ಜೊತೆಗೂ ಮಾತನಾಡಿದ್ದೆ. ಡಿಸೆಂಬರ್ ವರೆಗೆ ಎಲ್ಲಾ ಭಾನುವಾರ ಪರೀಕ್ಷೆ ನಿಗಧಿಯಾಗಿದೆ. ಶನಿವಾರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 28ನೇ ತಾರೀಖು ಈ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 22 ರಿಂದ 28 ಕ್ಕೆ ಪಿಎಸ್ಐ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment