Thursday, May 14, 2026
Google search engine
Homeಕಾನೂನುಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ

ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ

ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್‌ ಸಲೀಂ, ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಶೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ರಾಕೇಶ್‌ ಶೆಟ್ಟಿ ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments