ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಮಾಡಿದ ಮೋಡಿ ಮಾಡಿದ ದಶಕಗಳ ನಂತರ ಎಲ್ಲರ ನಿರೀಕ್ಷೆ ಮೀರಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಮೂಡಿಬಂದಿದ್ದು, ಎಲ್ಲೆಡೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬಾಹುಬಲಿ ನಂತರ ಸತತ ಸೋಲು ಕಂಡಿದ್ದ ಪ್ರಭಾಸ್ ಸಲಾರ್-1 ನಂತರ ಅದ್ಭುತವಾಗಿ ಚೇತರಿಸಿಕೊಂಡಿದ್ದರು. ಇದೀಗ ಕಲ್ಕಿ ಚಿತ್ರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೊಸ ಲೋಕಕ್ಕೆ ಪ್ರೇಕ್ಷಕರನ್ನು ಕರೆದೊಯ್ಯುತ್ತಾರೆ.
ಪ್ರಭಾಸ್ ಚಿತ್ರ ಜೀವನದ ಅದ್ಭುತ ಚಿತ್ರಗಳಲ್ಲಿ ಇದೂ ಒಂದಾಗಲಿದೆ ಎಂದು ಹೇಳಲಾಗಿದೆ. ಚಿತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ನಟಿಸಿದ್ದು, ಖಳನಾಯಕನ ಪಾತ್ರದಲ್ಲಿ ಕಮಲ್ ಹಾಸನ್ ಹೊಸ ಅವತಾರದಲ್ಲಿ ಮಿಂಚಿದ್ದಾರೆ.
ಗ್ರಾಫಿಕ್ ಎಫೆಕ್ಟ್ ಅದ್ಭುತವಾಗಿ ಮೂಡಿ ಬಂದಿದ್ದು, ಹಿಂದೂ ಪುರಾಣ ಹಾಗೂ ಆಧುನಿಕ ತಂತ್ರಜ್ಞಾನ ಎರಡನ್ನೂ ನಾಗ್ ಅಶ್ವಿನ್ ಸಮ್ಮಿಳನ ಮಾಡಿದ್ದು, ಪ್ರೇಕ್ಷಕರಿಗೆ ಹೊಸ ಪ್ರಪಂಚದ ರಸದೌತಣ ನೀಡಿದ್ದಾರೆ.
ಮೂಲಗಳ ಪ್ರಕಾರ ಕಲ್ಕಿ ಚಿತ್ರ ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದಿದ್ದು ಎಲ್ಲಾ ದಾಖಲೆಗಳನ್ನು ಮುರಿಯುವ ಸೂಚನೆ ನೀಡಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ನಲ್ಲಿ ಸಲಾರ್ ದಾಖಲೆಯನ್ನು ಮುರಿದಿರುವ ಕಲ್ಕಿ, ಮೊದಲ ದಿನದ ಗಳಿಕೆಯಲ್ಲೂ ಸಲಾರ್ ದಾಖಲೆ ಮುರಿಯುವ ಸೂಚನೆ ಇದೆ. ಸಲಾರ್ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಅತೀ ದೊಡ್ಡ ಓಪನಿಂಗ್ ಪಡೆದ ಮೂರನೇ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.