18 ವರ್ಷದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ ವಿಶ್ವದ ಅಗ್ರಮಾನ್ಯ ಆಟಗಾರ ಮ್ಯಾಗ್ನಸ್ ಕಾರ್ಲಸನ್ ವಿರುದ್ಧ ಮೊದಲ ಬಾರಿ ಗೆಲುವು ಸಾಧಿಸಿದ್ದಾರೆ.
ಗುರುವಾರ ನಡೆದ ನಾರ್ವೆ ಚೆಸ್ ಟೂರ್ನಿಯ 3ನೇ ಸುತ್ತಿನ ಪಂದ್ಯದಲ್ಲಿ ಪ್ರಜ್ಞಾನಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದರು.
6 ಆಟಗಾರರ ಟೂರ್ನಿಯಲ್ಲಿ ಮ್ಯಾಗ್ನಸ್ ಕಾರ್ಲಸನ್ ಅವರನ್ನು ತವರಿನಲ್ಲೇ ಪ್ರಜ್ಞಾನಂದ ಸೋಲಿಸಿದರು. ಈ ಮೂಲಕ ಫಿಡೇ ವಿಶ್ವಕಪ್ ಫೈನಲ್ ನಲ್ಲಿ ಆದ ಸೋಲಿಗೆ ಸೇಡು ತೀರಿಸಿಕೊಂಡರು.
9 ಅಂಕಗಳ ಟೂರ್ನಿಯಲ್ಲಿ ಪ್ರಜ್ಞಾನಂದ ಇದೀಗ 5.5 ಅಂಕದೊಂದಿಗೆ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದರು. ವಿಶೇಷ ಅಂದರೆ ಪ್ರಜ್ಞಾನಂದ ಸೋದರಿ ಆರ್.ವೈಶಾಲಿ ಕೂಡ ಮಹಿಳೆಯರ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.