ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎಸ್ ಐಟಿ ತನಿಖೆಗೆ ಆದೇಶಿಸುತ್ತಿದ್ದಂತೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದಾರೆ.
ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದ್ದು, ಮತದಾನ ಮಾಡಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ. ಇದರಿಂದ ತನಿಖೆ ಆರಂಭದಲ್ಲಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ಮಹಿಳಾ ಆಯೋಗ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಅಲ್ಲದೇ ಹಾಸನದಲ್ಲಿ ವಿವಿಧ ಸಂಘಟನೆಗಳು ದೂರು ನೀಡಲು ಮುಂದಾಗಿದ್ದವು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ ಐಟಿ ತನಿಖೆ ನಡೆಸಲು ಸೂಚಿಸಿರುವುದಾಗಿ ಟ್ವೀಟ್ ಮಾಡಿದ್ದರು.