Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜ್ಯ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣ: ದೇವರಾಜೇಗೌಡ ಸೇರಿ 39 ಮಂದಿ ವಿರುದ್ಧ ಚಾರ್ಜ್‌ ಶೀಟ್‌

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು
prajwal revanna devarajegowda

ಹಾಸನದ ಮಾಜಿ ಸಂಸದ ಜೆಡಿಎಸ್‌ ನ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಎಸ್‌ಐಟಿ ದೇವರಾಜೇಗೌಡ ಸೇರಿದಂತೆ 39 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಪೆನ್‌ಡ್ರೈವ್ ಹಂಚಿಕೆ ಮಾಡಿ ವೀಡಿಯೋ ವೈರಲ್‌ ಮಾಡಿದ ಪ್ರಕರಣದಲ್ಲಿ ಹಾಸನ ಎಸ್‌ ಐಟಿ 13,712 ಪುಟಗಳ ಚಾರ್ಜ್‌ ಶೀಟ್‌ ಅನ್ನು ಸಿವಿಲ್ ಕೋರ್ಟ್‌ಗೆ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಅಶ್ಲೀಲ ವಿಡಿಯೋ ಹಂಚಲು ಆರೋಪಿಗಳು 70 ಪೆನ್‌ಡ್ರೈವ್ ಖರೀದಿಸಿದ್ದರು. ಹಾಸನದಲ್ಲೇ 70 ಪೆನ್‌ಡ್ರೈವ್ ಖರೀದಿ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಈ ಸಂಬಂಧ 277 ಸಾಕ್ಷಿಗಳ ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ತಾಂತ್ರಿಕ ವರದಿ, ಎಫ್‌ಎಸ್‌ಎಲ್ ಸಾಕ್ಷಿಗಳ ವರದಿ ಆಧರಿಸಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದಲ್ಲಿ 52 ಮಂದಿ ಹೆಸರು ಉಲ್ಲೇಖ ಮಾಡಲಾಗಿತ್ತು. 52 ಮಂದಿಯಲ್ಲಿ 39 ಮಂದಿ ಆರೋಪ ಸಾಬೀತಾಗಿದೆ. ವಕೀಲ ಪೂರ್ಣಚಂದ್ರ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು. ಲೋಕಸಭೆ ಚುನಾವಣೆ ವೇಳೆ ಅಶ್ಲೀಲ ವಿಡಿಯೋ ವೈರಲ್ ಆಗಿತ್ತು. ಎಸ್‌ಐಟಿ ತನಿಖೆ ವೇಳೆ ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ.

ಪ್ರಕರಣದಲ್ಲಿ ಎರಡು ಪಕ್ಷದ ಕಾರ್ಯಕರ್ತರ ವಿರುದ್ಧ ಆರೋಪ ಕೇಳಿಬಂದಿದೆ. ವಿಡಿಯೋ ವೈರಲ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಕೈಬಿಡಲಾಗಿದೆ. ತನಿಖೆ ಪೂರ್ಣಗೊಳಿಸಿ ಹಾಸನ ಕೋರ್ಟ್‌ಗೆ ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದನ್ನೂ ಓದಿ: ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ

39 ಆರೋಪಿಗಳು ಯರು?

ಎ1 ನವೀನ್, ಎ2 ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್.ಎನ್, ಎ3 ಚೇತನ್.ಬಿ.ಸಿ., ಎ4 ಚೇತನ್.ವೈ.ಎಸ್, ಎ5 ಲಿಖಿತ್‌ಗೌಡ, ಎ6 ದೇವರಾಜೇಗೌಡ, ಎ7 ಗಿರೀಶ್.ಎಸ್, ಎ8 ಯೊಗೇಶ್.ವೈ.ಡಿ., ಎ9 ನಿಶಾಂತ್, ಎ10 ಹರೀಶ್.ಎಸ್.ಎನ್, ಎ11 ಸುಮಂತ್, ಎ12 ಕೃಷ್ಣೇಗೌಡ, ಎ13 ಕಿರಣ್.ಎಸ್.ಕೆ, ಎ14 ಶರತ್.ಎಂ.ಕೆ., ಎ15 ತೇಜಸ್.ಡಿ.ಎನ್, ಎ16 ಗಗನ್‌ಕುಮಾರ್, ಎ17 ರೇವಂತ್, ಎ18 ಶಿವಪ್ರಸಾದ್, ಎ19 ನಾಗೇಂದ್ರ ಜೈನ್, ಎ20 ವಸಂತ್‌ಕುಮಾರ್, ಎ21 ಸಮೀರ್‌ಅಹ್ಮದ್, ಎ22 ಬಾಲಸುಬ್ರಹ್ಮಣ್ಯ, ಎ23 ಚಿರಂತ್, ಎ24 ದೇವರಾಜ್.ಡಿ.ಹೆಚ್, ಎ25 ಜಯಸೂರ್ಯ, ಎ26 ಚಂದ್ರಶೇಖರ್.ಬಿ.ಕೆ., ಎ27 ಕುಮಾರ್, ಎ28 ದಿನೇಶ್.ಕೆ.ಕೆ., ಎ29 ನವೀನ್‌ಕುಮಾರ್.ಎನ್.ವಿ., ಎ30 ಪ್ರಶಾಂತ್.ಬಿ.ಎಸ್., ಎ31 ಅನಿಲ್.ಹೆಚ್.ವಿ., ಎ32 ಹರ್ಷವರ್ದನ್.ಹೆಚ್.ಎಂ., ಎ33 ಅಕ್ಷಯ್‌ಕುಮಾರ್, ಎ34 ಪ್ರವೀಣ್‌ಕುಮಾರ್, ಎ35 ಹರೀಶ್.ಎನ್.ಸಿ., ಎ36 ಶಶಾಂಕ್.ಹೆಚ್.ಎಂ., ಎ37 ಭರತ್, ಎ38 ಚೇತನ್ಕುಮಾರ್, ಎ39 ಸೋಮಶೇಖರ್.ಕೆ.ಕೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment