Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ಕಾನೂನು

ಪ್ರಜ್ವಲ್ ರೇವಣ್ಣಗೆ ಮುಖಭಂಗ: 2ನೇ ಅತ್ಯಾಚಾರ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
prajwal revanna

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿ ಸಲ್ಲಸಿದ್ದ ಅರ್ಜಿಯೂ ವಜಾಗೊಂಡಿದೆ.

ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್‌ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್‌ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಪ್ರಜ್ವಲ್‌ ಬಂಧನವಾಗಿ 14 ತಿಂಗಳು ಕಳೆದಿದೆ. ಇದೇ ಪ್ರಕರಣದ ಆರೋಪಿ ಎಚ್‌ ಡಿ ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ಹೀಗಾಗಿ ಪ್ರಜ್ವಲ್‌ಗೂ ಜಾಮೀನು ನೀಡುವಂತೆ ಕೋರಿದ್ದರು. ಸಿಐಡಿಯ ಎಸ್‌ಐಟಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕರು, ವಾದ ಮಂಡನೆ ಮಂಡಿದ್ದರು. ಈ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಎರಡನೇ ಬಾರಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ, ಮನೆ ಕೆಲಸದಾಕೆಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಪ್ರಕರಣವು ವಿಶೇಷ ತಿರುವು ಪಡೆದಿತ್ತು.

ಹೊಳೆನರಸೀಪುರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ವಿಶೇಷ ತನಿಖಾ ತಂಡ (SIT) ಈ ಪ್ರಕರಣದ ತನಿಖೆಯನ್ನು ನಡೆಸಿತ್ತು. ಸಿಐಡಿ ಇನ್ಸ್‌ಪೆಕ್ಟರ್ ಶೋಭಾ ಅವರು ತನಿಖೆಯನ್ನು ಮುನ್ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 26 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment