ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಚುನಾವಣೆಯಲ್ಲಿ ಆಘಾತ ಅನುಭವಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಕಳೆದ ಬಾರಿ ಹಾಸನದಲ್ಲಿ ಜಯಭೇರಿ ಬಾರಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಸೋಲುಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದು, ಸುಮಾರು 40 ಸಾವಿರ ಮತಗಗಳಿಂದ ಗೆಲುವು ಪಡೆದಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ 25 ವರ್ಷಗಳ ನಂತರ ಇದೇ ಮೊದಲ ಬಾರಿ ಹಾಸನದಲ್ಲಿ ಗೆಲುವು ಕಂಡಿದೆ.