Wednesday, May 20, 2026
Google search engine
Homeಅಪರಾಧಪ್ರವೀಣ್ ನೆಟ್ಯಾರು ಕೊಲೆ ಪ್ರಕರಣ: 2 ವರ್ಷಗಳ ನಂತರ ಪ್ರಮುಖ ಆರೋಪಿ ಅರೆಸ್ಟ್

ಪ್ರವೀಣ್ ನೆಟ್ಯಾರು ಕೊಲೆ ಪ್ರಕರಣ: 2 ವರ್ಷಗಳ ನಂತರ ಪ್ರಮುಖ ಆರೋಪಿ ಅರೆಸ್ಟ್

ಕಣ್ಣೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ಧುಲ್ ರಹಮಾನ್ ನನ್ನು ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ಕತಾರ್ನಿಂದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಕಈ) ನಾಯಕರ ನಿದರ್ೆಶನದನ್ವಯ ಪ್ರಕರಣದ ಪ್ರಮುಖ ದಾಳಿಕೋರರಿಗೆ ಅಬ್ದುಲ್ ರೆಹಮಾನ್ ಸ್ವಯಂಪ್ರೇರಣೆಯಿಂದ ಆಶ್ರಯ ನೀಡಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿತ್ತು.

ಪ್ರಕರಣದ ಇತರೆ ಆರೋಪಿಗಳ ಬಂಧನವಾಗುತ್ತಿದ್ದಂತೆ ಆರೋಪಿ ಕತಾರ್ಗೆ ಪರಾರಿಯಾಗಿದ್ದ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಒಟ್ಟು 6 ಆರೋಪಿಗಳ ಮಾಹಿತಿಗಾಗಿ (ಅಬ್ದುಲ್ ರಹಮಾನ್ಗಾಗಿ 4 ಲಕ್ಷ) ಎನ್ಐಎ ಬಹುಮಾನ ಘೋಷಿಸಿತ್ತು. ಅಲ್ಲದೆ ಅಬ್ದುಲ್ ರೆಹಮಾನ್, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳು ಸೇರಿದಂತೆ ಒಟ್ಟು 4 ಜನ ಆರೋಪಿಗಳ ವಿರುದ್ಧ ಈ ವರ್ಷ ಏಪ್ರಿಲ್ನಲ್ಲಿ ಎನ್ಐಎ ಚಾಜರ್್ ಶೀಟ್ ಸಲ್ಲಿಸಿತ್ತು. ಆ ಮೂಲಕ ಪ್ರಕರಣದಲ್ಲಿ ಒಟ್ಟು 28 ಜನರ ವಿರುದ್ಧ ಚಾಜರ್್ ಶೀಟ್ ಸಲ್ಲಿಸಿದಂತಾಗಿತ್ತು.

2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು? ಅವರನ್ನು ಪಿಎಫ್ಐ ಕಾರ್ಯಕರ್ತರು ಮತ್ತು ಸದಸ್ಯರು ಭೀಕರವಾಗಿ ಕೊಲೆ ಮಾಡಿದ್ದರು. ಈ ಸಂಬಂಧ ಆಗಸ್ಟ್ 4 ರಂದು ಎನ್ಐಎ ತನಿಖೆ ಆರಂಭಿಸಿತ್ತು. ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನ ಕೈಗೆತ್ತಿಕೊಂಡಿತ್ತು.

ಹತ್ಯೆ ಬಳಿಕ ಪರಾರಿಯಾಗಲು ಪ್ರಮುಖ ಆರೋಪಿ ಮುಸ್ತಾಫ ಪೈಚಾರ್??ಗೆ ಬಂಧಿತರಾದ ಅತೀಕ್ ಹಾಗೂ ಸದ್ಯ ಮೃತನಾಗಿರುವ ಕಲಾಂದರ್ ಚೆನ್ನೈನಲ್ಲಿ 2022ರಿಂದ 2023ರ ವರೆಗೆ ಆಶ್ರಯ ಒದಗಿಸಿದ್ದರು. ಅಲ್ಲದೆ, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ವಿದೇಶಕ್ಕೆ ಪರಾರಿಯಾಗಲು ಹಾಗೂ ರಿಯಾಜ್ ಎಂಬಾತ ಪೈಚಾರ್?ಗೆ ಆಶ್ರಯ ಒದಗಿಸುವ ಬಗ್ಗೆ ಅತೀಕ್ ಹಾಗೂ ಕಲಾಂದರ್??ಗೆ ಮಾರ್ಗದರ್ಶನ ನೀಡಿದ್ದ ಎಂದು ಚಾಜರ್್ ಶೀಟ್??ನಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದು, ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments