Thursday, May 14, 2026
Google search engine
Homeರಾಜ್ಯಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ಮರ್ಮು: ನಾಳೆ ಸಿದ್ಧಗಂಗಾ ಮಠಕ್ಕೆ ಭೇಟಿ

ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ಮರ್ಮು: ನಾಳೆ ಸಿದ್ಧಗಂಗಾ ಮಠಕ್ಕೆ ಭೇಟಿ

ತುಮಕೂರು: ರಾಷ್ಟ್ರಪತಿ ದ್ರೌಪದಿ ಮರ್ಮು ಏಪ್ರಿಲ್ 1ರಂದು ಬುಧವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮರ್ಮು ಮಂಗಳವಾರ ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಲೋಕ್ ಪಾಲ್ ಭವನದಲ್ಲಿ ತಂಗಿದ್ದಾರೆ.

ಬುಧವಾರ ಬೆಳಗ್ಗೆ 9ಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಮಠದಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಆ ಬಳಿಕ ಸ್ವಾಮೀಜಿಯ ಜನ್ಮದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಲಿದ್ದು, ಮಠದ 10,000 ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮರ್ಮು ಭೇಟಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 1,500 ಪೊಲೀಸ್ ಸಿಬ್ಬಂದಿಯೊಂದಿಗೆ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ಬೆಳಿಗ್ಗೆ ಇಲ್ಲಿನ ಹೆಲಿಪ್ಯಾಡ್​ನಲ್ಲಿ ಲ್ಯಾಂಡ್ ಆಗಲಿದೆ. ಅಲ್ಲಿಂದ ಸಿದ್ದಗಂಗಾ ಮಠಕ್ಕೆ ಹೊರಟು ಕಾರ್ಯಕ್ರಮ ಮುಗಿಸಿ ಬಂದಿರುವ ಹೆಲಿಕಾಪ್ಟರ್​ನಲ್ಲೇ ಅವರು ವಾಪಸ್ ತೆರಳಲಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದ​ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಎಂ.ಬಿ.ಪಾಟೀಲ್​ ಸೇರಿದಂತೆ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments