ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೊಡಾ ಆವರಿಸಿರುವ ಹಿನ್ನೆಲೆಯಲ್ಲಿ ಪರಿಣಾಮಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ತುರ್ತು ಸಭೆ ಕರೆದಿದ್ದಾರೆ.
ಸಂಪುಟ ದರ್ಜೆಯ ಭದ್ರತಾ ವಿಭಾಗದ ಮುಖ್ಯಸ್ಥರ ಸಭೆಯನ್ನು ಕರೆದಿರುವ ಪ್ರಧಾನಿ ಮೋದಿ, ದೇಶದ ಭದ್ರತೆ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಮೋದಿ ಸಭೆಯ ನೇತೃತ್ವ ವಹಿಸಲಿದ್ದರೆ, ಗೃಹಗ ಸಚಿವ, ರಕ್ಷಣಾ ಸಚಿವ, ವಿದೇಶಾಂಗ ಸಚಿವ, ವಿತ್ತ ಸಚಿವೆ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಸಂಭಾವ್ಯ ಉಂಟಾಗಿದೆ.
ಇರಾನ್ ಖಂಡಾಂತರ ಕ್ಷಿಪಣಿಗಳಿಂದ ಇಸ್ರೇಲ್ ಮೇಲೆ ದಾಳಿ ನಡೆಸಿದ್ದರೆ, ಇಸ್ರೇಲ್ ದಿಟ್ಟ ಪರಿಣಾಮ ಎದುರಿಸಲು ಸಜ್ಜಾಗಿ ಎಂದು ಎಚ್ಚರಿಸಿದ್ದು, ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಜ್ಜಾಗಿದೆ ಎಂದು ಅವರು ಹೇಳಿದರು.
ಇರಾನ್ ನಲ್ಲಿರುವ ತೈಲ ಘಟಕಗಳನ್ನು ಕೇಂದ್ರೀಕರಿಸಿ ದಾಳಿ ನಡೆಸಲು ಸಿದ್ಧತೆ ನಡೆದಿದೆ. ಇದರಿಂದ ಭಾರತಕ್ಕೆ ತೈಲ ಆಮದು ಸೇರಿದಂತೆ ವಿವಿಧ ಆಮದು ಮಾಡಿಕೊಳ್ಳುವ ಪ್ರಮುಖ ಉತ್ಪನ್ನಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.