ಪ್ರಧಾನಿ ನರೇಂದ್ರ ಮೋದಿ ಜೂನ್ 18ರಂದು ವಾರಣಾಸಿ ಭೇಟಿ ವೇಳೆ ರೈತರಿಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಿದ್ದಾರೆ.
ಜೂನ್ 18ರಂದು ಪ್ರಧಾನಿ ಮೋದಿ ತಾವು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿ ವಾರಣಾಸಿಗೆ ಮೋದಿ ಭೇಟಿ ನೀಡಲಿದ್ದಾರೆ.
ಪ್ರಧಾನಿ ಜೊತೆಯಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ವಾರಣಾಸಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. 17ನೇ ಕಂತಿನ ಹಣ ಬಿಡುಗಡೆ ಮಾಡುವುದರಿಂದ 9.6 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಇದುವರೆಗೆ ದೇಶಾದ್ಯಂತ ಪಿಎಂ ಕಿಸಾನ್ ಜೊತೆಯಾಡಿ 11 ಕೋಟಿ ಜನರಿಗೆ 3.04 ಲಕ್ಷ ಕೋಟಿ ರೂ. ತಲುಪಿದೆ ಎಂದು ಅವರು ಹೇಳಿದರು.