Saturday, August 15, 2026
Google search engine
HomeUncategorizedಬೇಟೆಗೆ ಬಂದ ಮೂವರಿಗೆ ಗುಂಡಿಕ್ಕಿ ಕೊಂದ ಅರಣ್ಯ ಸಿಬ್ಬಂದಿ: ಗ್ರಾಮಸ್ಥರಿಂದ ಪ್ರತಿಭಟನೆ

ಬೇಟೆಗೆ ಬಂದ ಮೂವರಿಗೆ ಗುಂಡಿಕ್ಕಿ ಕೊಂದ ಅರಣ್ಯ ಸಿಬ್ಬಂದಿ: ಗ್ರಾಮಸ್ಥರಿಂದ ಪ್ರತಿಭಟನೆ

ಚಾಮರಾಜನಗರ: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಕಾಡಂಚಿನ ಗ್ರಾಮಸ್ಥರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನಜಾವ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಲಭಿಸಿದೆ.

ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ, ಬೇಟೆಗಾರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರಿಗೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂವರ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, ಕುಮಾರ್ ಎಂಬುವರು ಮೃತಪಟ್ಟಿದ್ದಾರೆ. ಇನ್ನೂ ಮಹಿಮದಾಸ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.

ಉದ್ರಿಕ್ತರಿಂದ ಪೀಠೋಪಕರಣ ಧ್ವಂಸ: ಇನ್ನು ಮೂವರು ಮೃತಪಟ್ಟ ಮಾಹಿತಿ ತಿಳಿದು ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಶಾಗ್ಯ ಡಿಆರ್​ಎಫ್​ಒ ಕಚೇರಿಗೆ ಒಳನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಗುಂಡೇಟಿಗೆ ಬಲಿಯಾದ ಮೂವರು ಕಳ್ಳ ಬೇಟೆಗಾರರಲ್ಲ, ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿಯನ್ನೇ ಮಾಡರಲಿಲ್ಲ. ಆದರೂ ಸಹ ಪ್ರತಿ ದಾಳಿಯ ಹೆಸರಿನಲ್ಲಿ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

\ಮೃತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿಲ್ಲ‌. ಪ್ರತಿದಾಳಿಯ ನೆಪದಲ್ಲಿ ಮೂವರನ್ನು ಗುಂಡಿಟ್ಟು ಕೊಂದಿದ್ದಾರೆ. ಈ ಪ್ರಕರಣ ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಮೈಸೂರಿನಲ್ಲಿ ಮೃತ ಸಂಬಂಧಿ ವಿಜಯ್ ಮಾತನಾಡಿ, ಮೃತಪಟ್ಟ ಮೂವರು ನಮ್ಮ ಸಂಬಂಧಿಕರು. ಅವರೆಲ್ಲ ರೈತರು. ಕಾಡಿಗೆ ಹೋದಾಗ ಏಕಾಏಕಿ ಶೂಟ್ ಮಾಡಿದ್ದಾರೆ. ಅರಣ್ಯ ಸಿಬ್ಬಂದಿಯು ಎನ್​ ಕೌಂಟರ್ ಮಾಡುವ ಅಗತ್ಯ ಏನಿತ್ತು?, ನಮ್ಮವರು ಯಾರ ಮೇಲೆ ಗುಂಡು ಹಾರಿಸಿದ್ದಾರೆ ತೋರಿಸಲಿ. ಮೃತರಿಗೆ ಮದುವೆಯಾಗಿದ್ದು, ಮೂವರಿಗೂ ಚಿಕ್ಕಮಕ್ಕಳಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ತೋಮಿಯಾರ್ ಪಾಳ್ಯ, ಮಾರ್ಟಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹನೂರು ಪಟ್ಟಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸುತ್ತಿದ್ದಾರೆ.

ಉದ್ದೇಶಪೂರ್ವಕವಾಗಿ ಅರಣ್ಯ ಇಲಾಖೆ ಶೂಟೌಟ್ ಮಾಡಿದ್ದು, ಬೇಟೆಗಾರರ ಹೆಸರಿನಲ್ಲಿ ಕೊಂದಿದ್ದಾರೆ ಎಂದು ಪೋಸ್ಟರ್​ಗಳನ್ನು ಹಿಡಿದು ಆಕ್ರೋಶ ಹೊರಹಾಕುತ್ತಿದ್ದಾರೆ. ಸ್ಥಳಕ್ಕೆ ಶಾಸಕ ಮಂಜುನಾಥ್ ಭೇಟಿ ನೀಡಿದ್ದು, ಉಸ್ತುವಾರಿ ಸಚಿವರು ಬರುವ ತನಕ ಧರಣಿ ಕೈ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಹನೂರಿನ‌ ಅರಣ್ಯ ಕಚೇರಿಗೆ ಮುತ್ತಿಗೆ ಹಾಕಲು‌ ಯತ್ನಿಸುವ ಹಿನ್ನೆಲೆ 200 ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಸದ್ಯ, ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದರು.

ಘಟನೆ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ ನೀಡಿ, ಈ ಕುರಿತು ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳ ಜೊತೆ ಮಾತನಾಡಿದ್ದು, ಕಳ್ಳಬೇಟೆಗೆ ತೆರಳಿದ್ದವರು ಸಿಬ್ಬಂದಿ ಮೇಲೆ ನಾಡ ಬಂದೂಕುಗಳಿಂದ ದಾಳಿ ಮಾಡಿದಾಗ ಪ್ರತಿದಾಳಿ ಮಾಡಿದಾಗ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಸ್ಥಳೀಯರು, ಮೃತಪಟ್ಟವರು ಅಮಾಯಕರಾಗಿದ್ದು ಬೇಟೆಗೆ ಹೋಗಿರಲಿಲ್ಲ ಎನ್ನುತ್ತಿದ್ದಾರೆ. ಪರಿಶೀಲಿಸಿ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments