Saturday, May 16, 2026
Google search engine
Homeರಾಜ್ಯಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಢದಲ್ಲಿ ಪ್ರತಿಭಟನೆ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಢದಲ್ಲಿ ಪ್ರತಿಭಟನೆ

ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ ಸ್ವರೂಪ ಪಡೆದಿದೆ.

ನಗರದ ಶ್ರೀನಗರ ಪ್ರದೇಶದಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕರು ಜಮಾವಣೆಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಮಿಚಿಗನ್ ಕಂಪೌಂಡ್ ಕಡೆಗೆ ಧಾವಿಸಿದರು.

ಪೊಲೀಸರು ಆರಂಭದಲ್ಲೇ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರೂ, ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಿದ್ದು, ಭದ್ರತಾ ದೃಷ್ಟಿಯಿಂದ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಮಿಚಿಗನ್ ಕಂಪೌಂಡ್ ಸಮೀಪ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಮಾತುಕತೆಗೆ ಆಹ್ವಾನಿಸಿದ್ದಾರೆ. ಕೆಲವು ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ಮೂರು ದಿನಗಳಿಂದ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿಭಟನಾಕಾರರು ಶಾಂತಿಯುತವಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಲು ಸಿದ್ಧವಿರುವುದಾಗಿ ತಿಳಿಸಿದ್ದು, ಸರ್ಕಾರದಿಂದ ಸ್ಪಷ್ಟ ಭರವಸೆ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪರಿಸ್ಥಿತಿ ಮೇಲ್ವಿಚಾರಣೆಯಲ್ಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments