402 ಪಿಎಸ್ ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಪರೀಕ್ಷೆಗೆ 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ದಿನ ಮೊದಲೇ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಸೋಮವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಎಸ್ ಐ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
402 #PSI ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ #kea ಸಕಲ ಸಿದ್ಧತೆ ನಡೆಸಿದೆ.
66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.@CMofKarnataka @drmcsudhakar— KEA (@KEA_karnataka) September 2, 2024
ಇದೇ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಬೆಂಗಳೂರಿನಲ್ಲಿ ಡಿಸೆಂಬರ್ 22ರಂದು ನಡೆಯಲಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಕನ್ನಡ ವಿಭಾಗದ ಪರೀಕ್ಷೆಯಲ್ಲಿ ಲೋಷದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದ್ದು, ಪೊಲೀಸ್ ಇಲಾಖೆ ಈ ಹಿಂದೆ ಪರೀಕ್ಷೆಗೆ ಅರ್ಹತೆ ಪಡೆದವರು ಮರು ಪರೀಕ್ಷೆಗೆ ಅರ್ಹರು ಎಂದು ತಿಳಿಸಿದೆ.
*PSI Re-exam on Dec 23rd
ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. 23ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು ಪರೀಕ್ಷೆಗೂ ಅರ್ಹರು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.@CMofKarnataka @drmcsudhakar
— KEA (@KEA_karnataka) November 22, 2023