Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

IPL 2025 ರನ್ ಹೊಳೆಯಲ್ಲಿ ಗೆದ್ದು ಬೀಗಿದ ಪಂಜಾಬ್; ಗುಜರಾತ್ ಗೆ 11 ರನ್ ಸೋಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು

ಬೌಂಡರಿ-ಸಿಕ್ಸರ್ ಗಳ ಮೇಲಾಟದಲ್ಲಿ ಹರಿದ ರನ್ ಹೊಳೆಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 11 ರನ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ.

ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್ ಸಂಪಾದಿಸಿತು. ಬೃಹತ್ ಮೊತ್ತ ಬೆಂಬತ್ತಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 232 ರನ್ ಗಳಿಸುವ ಮೂಲಕ ವೀರೋಚಿತ ಸೋಲುಂಡಿತು.

ಕಠಿಣ ಗುರಿ ಬೆಂಬತ್ತಿದ ಗುಜರಾತ್ ಗೆ ನಾಯಕ ಶುಭಮನ್ ಗಿಲ್ (33) ಮತ್ತು ಸಾಯಿ ಸುದರ್ಶನ್ 61 ರನ್ ಜೊತೆಯಾಟದಿಂದ ಉತ್ತಮ ಆರಂಭ ನೀಡಿದರು. ನಂತರ ಸಾಯಿ ಮತ್ತು ಜೋಸ್ ಬಟ್ಲರ್ 2ನೇ ವಿಕೆಟ್ ಗೆ 84 ರನ್ ಜೊತೆಯಾಟದಿಂದ ಗೆಲುವಿನ ಭರವಸೆ ಮೂಡಿಸಿದರು.

ಆದರೆ ಸಾಯಿ ಸುದರ್ಶನ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 74 ರನ್ ಬಾರಿಸಿ ಔಟಾದರೆ, ಬಟ್ಲರ್ 33 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 54 ರನ್ ಬಾರಿಸಿದ್ದಾಗ ಔಟಾದರು. ಇವರಿಬ್ಬರ ನಂತರ ಸತತ ವಿಕೆಟ್ ಕಳೆದುಕೊಂಡು ರನ್ ಸರಾಸರಿ ಕಾಯ್ದುಕೊಳ್ಳುವಲ್ಲಿ ಗುಜರಾತ್ ವಿಫಲವಾಯಿತು. ರುದರ್ಫೋಡ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿ ಸೋಲಿನ ಅಂತರ ತಗ್ಗಿಸಿದರು.

ಶ್ರೇಯಸ್ ಕೈ ತಪ್ಪಿದ ಶತಕ

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶತಕ ವಂಚಿತ ನಾಯಕ ಶ್ರೇಯಸ್ ಅಯ್ಯರ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ದಾಖಲಿಸಿತು.

ಪ್ರಭಾಸಿಮ್ರನ್ ಸಿಂಗ್ (5) ವಿಕೆಟ್ ಕಳೆದುಕೊಂಡ ನಂತರ ಜೊತೆಯಾದ ಪ್ರಿಯಾಂಶ್ ಆರ್ಯಾ (45) ಮತ್ತು ಶ್ರೇಯಸ್ ಅಯ್ಯರ್ 51 ರನ್ ಜೊತೆಯಾಟದಿಂದ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು. ನಂತರ ಒಂದರ ಹಿಂದೆ ಒಂದರಂತೆ ವಿಕೆಟ್ ಉರುಳುತ್ತಿದ್ದರೂ ಏಕಾಂಗಿಯಾಗಿ ತಂಡವನ್ನು ಬೃಹತ್ ಮೊತ್ತದತ್ತ ಅಯ್ಯರ್ ಮುನ್ನಡೆಸಿದರು.

ಅಯ್ಯರ್ 42 ಎಸೆತಗಳಲ್ಲಿ 5 ಬೌಂಡರಿ ಮತ್ತು 9 ಸಿಕ್ಸರ್ ಒಳಗೊಂಡ 97 ರನ್ ಬಾರಿಸಿ ಅಜೇಯರಾಗಿ ಉಳಿದರು. ಅಲ್ಲದೇ ಮುರಿಯದ 6ನೇ ವಿಕೆಟ್ ಗೆ ಶಶಾಂಕ್ ಸಿಂಗ್ ಜೊತೆ 5 ಓವರ್ ಗಳಲ್ಲಿ 82 ರನ್ ಜೊತೆಯಾಟ ನಿಭಾಯಿಸಿದರು. ಶಶಾಂಕ್ 16 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 44 ರನ್ ಚಚ್ಚಿದರು. ಗುಜರಾತ್ ಟೈಟಾನ್ಸ್ ಪರ ಸಾಯಿ ಕೃಷ್ಣನ್ 3 ವಿಕೆಟ್ ಪಡೆದು ಪ್ರಭಾವಿ ಎನಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment