ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ವಿಶ್ವ ಚಾಂಪಿಯನ್ ಅಕಾನೆ ಯಮಗುಚಿ ಅವರನ್ನು ಸೋಲಿಸಿ ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ 7 ವರ್ಷಗಳ ಸುದೀರ್ಘ ಅವಧಿಯ ನಂತರ ಪ್ರಶಸ್ತಿಯ ಬರ ನೀಗಿಸಿಕೊಂಡಿದ್ದಾರೆ.
31 ವರ್ಷದ ಪಿವಿ ಸಿಂಧು ಇದೇ ಮೊದಲ ಬಾರಿ ಜಪಾನ್ ಓಪನ್ ಗೆದ್ದು ಮತ್ತೊಂದು ದಾಖಲೆ ಬರೆದಿದ್ದಾರೆ.
2022ರಲ್ಲಿ ಕಾಮನ್ ವೆಲ್ತ್ ಪ್ರಶಸ್ತಿ ಗೆದ್ದ ನಂತರ ಸಿಂಧು ಯಾವುದೇ ಪ್ರಮುಖ ಟೂರ್ನಿಗಳನ್ನು ಗೆದ್ದಿರಲಿಲ್ಲ. ಈ ಮೂಲಕ ಪ್ರಶಸ್ತಿ ಬರ ನೀಗಿಸಿಕೊಂಡಿದ್ದಾರೆ.
ಭಾನುವಾರ ನಡೆದ ವನಿತೆಯರ ಸಿಂಗಲ್ಸ್ ಫೈನಲ್ ನಲ್ಲಿ ಪಿವಿ ಸಿಂಧು 50 ನಿಮಿಷಗಳ ಹೋರಾಟದಲ್ಲಿ 21-17, 21-17 ನೇರ ಸೆಟ್ ಗಳಿಂದ ಅಕಾನೆ ಯಮಗುಚಿ ಅವರನ್ನು ಸೋಲಿಸಿದರು.
ಕಾಮನ್ ವೆಲ್ತ್ ಕ್ರೀಡಾಕೂಟದ ನಂತರ ಎಡಗಾಲಿನ ಮಂಡಿ ನೋವಿಗೆ ಒಳಗಾದ ನಂತರ ತಮ್ಮ ಲಯ ಕಳೆದುಕೊಂಡಿದ್ದರು. ಈ ಮೂಲಕ ಒಂದು ಕಾಲದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಾಬಲ್ಯ ಹೊಂದಿದ್ದ ಪಿವಿ ಸಿಂಧು ಲಯ ಕಳೆದುಕೊಂಡು ಪ್ರಶಸ್ತಿ ಹೊಸ್ತಿಲಲ್ಲಿ ಎಡವುತ್ತಿದ್ದರು.



